'ದಚ್ಚು' ಮನವಿಗೆ ಸ್ಪಂದಿಸಿದ ರಿಯಲ್ ಸ್ಟಾರ್; ಆಫ್ರಿಕನ್ ಆನೆ ದತ್ತು ಪಡೆದ ಉಪೇಂದ್ರ
ಮೃಗಾಲಯದಲ್ಲಿರುವ ಪ್ರಾಣಿ,ಪಕ್ಷಿಗಳನ್ನು ದತ್ತು ಪಡೆಯಲು ನಟ ದರ್ಶನ್ ಅವರು ಕರೆ ನೀಡಿದ ಬೆನ್ನಲ್ಲೇ ನಟ ಉಪೇಂದ್ರ, ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ.
Published: 11th June 2021 12:05 PM | Last Updated: 11th June 2021 12:05 PM | A+A A-

ಆನೆ ದತ್ತು ಪಡೆದ ಉಪೇಂದ್ರ
ಬೆಂಗಳೂರು: ಮೃಗಾಲಯದಲ್ಲಿರುವ ಪ್ರಾಣಿ,ಪಕ್ಷಿಗಳನ್ನು ದತ್ತು ಪಡೆಯಲು ನಟ ದರ್ಶನ್ ಅವರು ಕರೆ ನೀಡಿದ ಬೆನ್ನಲ್ಲೇ ನಟ ಉಪೇಂದ್ರ, ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್ ಆನೆಯೊಂದನ್ನು ದತ್ತು ಪಡೆದಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಪ್ರಮಾಣ ಪತ್ರವನ್ನು ಅಪ್‌ಲೋಡ್ ಮಾಡಿರುವ ಉಪೇಂದ್ರ, ‘ಪ್ರಾಣಿಗಳೇ ಗುಣದಲಿ ಮೇಲು. ನನ್ನ ಮೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು, ಈ ಮೂಲಕ ದರ್ಶನ್‌ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.