ಸಂಚಾರ ಮುಗಿಸಿದ ವಿಜಯ್: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನ, ಸ್ವಗ್ರಾಮ ಪಂಚನಹಳ್ಳಿಯಲ್ಲಿಂದು ಅಂತ್ಯಕ್ರಿಯೆ
ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ.
Published: 15th June 2021 08:26 AM | Last Updated: 15th June 2021 12:37 PM | A+A A-

ಸಂಚಾರಿ ವಿಜಯ್
ಬೆಂಗಳೂರು: ಮೆದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ ನಟ ಸಂಚಾರಿ ವಿಜಯ್ (37) ಅವರ ಅಂತ್ಯಕ್ರಿಯೆ ಸ್ವಗ್ರಾಮ ಚಿಕ್ಕಮಗಳೂರಿನ ಕಡೂರಿನ ಪಂಚನಹಳ್ಳಿಯಲ್ಲಿ ಮಂಗಳವಾರ ಸಂಜೆ ವೇಳೆಗೆ ನಡೆಯಲಿದೆ.
ಅಂಗಾಂಗ ಕಸಿ ಕಾರ್ಯ ಮುಗಿದ ನಂತರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರಿಂದ ಅಪೋಲೊ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಇದರಂತೆ ಆಸ್ಪತ್ರೆ ಹಾಗೂ ಪೊಲೀಸರ ಅಂತಿಮ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ವಿಜಯ್ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಸಂಚಾರಿ ವಿಜಯ್ ಅವರ ಅಂತಿಮ ದರ್ಶನಕ್ಕೆ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 8 ರಿಂದ 10ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ನಂತರ ಸಂಜೆ ವೇಳೆಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಟ ವಿಜಯ್ ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.