ಉಪೇಂದ್ರ-ಸುದೀಪ್ ಅಭಿಮಾನಿಗಳಿಗೆ ರಸದೌತಣ: 'ಕಬ್ಜ' ಚಿತ್ರದ ಕಾಂಬೋ ಪೋಸ್ಟರ್ ಬಿಡುಗಡೆ 

ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭಾನುವಾರ ರಸದೌತಣ. ನಟ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹು ನಿರೀಕ್ಷಿತ ಕಬ್ಜ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ನೋಡಲು ಆಕರ್ಷಕವಾಗಿದೆ.
ಕಬ್ಜ ಚಿತ್ರದ ಪೋಸ್ಟರ್
ಕಬ್ಜ ಚಿತ್ರದ ಪೋಸ್ಟರ್
Updated on

ಉಪೇಂದ್ರ ಮತ್ತು ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಭಾನುವಾರ ರಸದೌತಣ. ನಟ ಉಪೇಂದ್ರ ನಾಯಕನಾಗಿ ಅಭಿನಯಿಸುತ್ತಿರುವ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹು ನಿರೀಕ್ಷಿತ ಕಬ್ಜ ಚಿತ್ರದ ಪೋಸ್ಟರ್ ಬಿಡುಗಡೆಯಾಗಿದ್ದು ನೋಡಲು ಆಕರ್ಷಕವಾಗಿದೆ.

'ಐ ಲವ್ ಯು' ಚಿತ್ರದ ಬಳಿಕ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಿರ್ದೇಶಕ ಆರ್.ಚಂದ್ರು ಒಂದಾಗಿರುವುದು 'ಕಬ್ಜ' ಚಿತ್ರದಲ್ಲಿ. ಭೂಗತ ಲೋಕದ ಕಥಾಹಂದರ ಹೊಂದಿರುವ 'ಕಬ್ಜ' ಚಿತ್ರ ಈಗಾಗಲೇ ಬಹು ನಿರೀಕ್ಷೆ ಮೂಡಿಸಿದೆ. 'ಕಬ್ಜ' ಚಿತ್ರದಲ್ಲಿ ಉಪೇಂದ್ರ ಜೊತೆಗೆ ಕಿಚ್ಚ ಸುದೀಪ್ ಕೂಡ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇಂದು ಚಿತ್ರದ ಕಾಂಬೊ ಪೋಸ್ಟರ್ ಬಿಡುಗಡೆಯಾಗಿದ್ದು, ಉಪೇಂದ್ರ ಹಾಗೂ ಸುದೀಪ್ ಖಡಕ್ ಆಗಿ ಕಾಣಿಸಿಕೊಂಡಿರುವುದು ಅಭಿಮಾನಿಗಳಿಗೆ ಇಷ್ಟವಾಗಿದೆ.

ಕಬ್ಜ ಚಿತ್ರದಲ್ಲಿ 'ಭಾರ್ಗವ್ ಬಕ್ಷಿ' ಎಂಬ ಪಾತ್ರದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. 'ಕಬ್ಜ' ಪ್ಯಾನ್ ಇಂಡಿಯಾ ಚಿತ್ರವಾಗಿದೆ. ಜಗಪತಿ ಬಾಬು, ಕಬೀರ್ ದುಹಾನ್ ಸಿಂಗ್, ಪ್ರಮೋದ್ ಶೆಟ್ಟಿ, ಅನೂಪ್ ರೇವಣ್ಣ, ಕಾಮರಾಜ್ ಮೊದಲಾದವರು ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಕಬ್ಜಾ ಎಂಬುದು 1940 ಮತ್ತು 1980 ರ ನಡುವಿನ ದರೋಡೆಕೋರ ಭೂಗತಲೋಕದ ಕಥಾಹಂದರವನ್ನು ಹೊಂದಿರುವ ಚಿತ್ರವಾಗಿದೆ. ಚಿತ್ರವನ್ನು ಬೆಂಗಳೂರು ಮತ್ತು ಹೈದರಾಬಾದ್‌ನಲ್ಲಿ ಚಿತ್ರೀಕರಿಸಲಾಗುತ್ತಿದೆ. ರವಿ ಬಸ್ರೂರು ಸಂಗೀತ, ಕಲಾ ವಿಭಾಗವನ್ನು ಶಿವಕುಮಾರ್ ನಿರ್ವಹಿಸುತ್ತಿದ್ದಾರೆ. ಚಿತ್ರದ ಛಾಯಾಗ್ರಹಣ ಮತ್ತು ಸಂಕಲನ ಕ್ರಮವಾಗಿ ಎಜೆ ಶೆಟ್ಟಿ ಮತ್ತು ಮಹೇಶ್ ರೆಡ್ಡಿ ನಿರ್ವಹಿಸಿದ್ದಾರೆ. ಚಿತ್ರದಲ್ಲಿನ ಸಾಹಸಗಳನ್ನು ರವಿವರ್ಮ, ವಿಕ್ರಮ್ ಮೊರ್ ಮತ್ತು ವಿಜಯ್ ನೃತ್ಯ ಸಂಯೋಜಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com