ಬ್ರಾಹಣ್ಯ ಹೇಳಿಕೆ ವಿವಾದ: ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ನಟ ಚೇತನ್ ಮಾನನಷ್ಟ ಮೊಕದ್ದಮೆ ದಾಖಲು
ಬ್ರಾಹಣ್ಯ ಟೀಕೆ ಆರೋಪಕ್ಕಾಗಿ ತಮ್ಮ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ಕುಮಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆಯನ್ನು ನಗರದ ನ್ಯಾಯಾಲಯವೊಂದರಲ್ಲಿ ಹಾಕಿದ್ದಾರೆ.
Published: 28th June 2021 01:04 AM | Last Updated: 28th June 2021 01:43 PM | A+A A-

ನಟ ಚೇತನ್ ಕುಮಾರ್
ಬೆಂಗಳೂರು: ಬ್ರಾಹಣ್ಯ ಟೀಕೆ ಆರೋಪಕ್ಕಾಗಿ ತಮ್ಮ ವಿರುದ್ಧ ಅವಹೇಳನಾಕಾರಿ ಮಾತುಗಳನ್ನಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ಕುಮಾರ್, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆಯನ್ನು ನಗರದ ನ್ಯಾಯಾಲಯವೊಂದರಲ್ಲಿ ಹಾಕಿದ್ದಾರೆ.
ಜೂನ್ 11 ರಂದು ಟ್ವಿಟರ್ ನಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ, ಆಕ್ಷೇಪಾರ್ಹ ಭಾಷೆ ಬಳಸಿರುವುದಕ್ಕೆ ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿರುವುದಾಗಿ ಚೇತನ್ ತಿಳಿಸಿದ್ದಾರೆ.
ಸಮಾಜದಲ್ಲಿ ತನನ್ನು ಗುರುತಿಸಿಕೊಳ್ಳಲು ಅಥವಾ ಗಂಜೀ ಕಾಸಿನ ಆಸೆಗೋ ಹೇಳಿಕೆ ಕೊಡೋ ಇಂತಹ ಸಮಾಜ ಕಂಟಕರನ್ನು ಕಾನೂನಿನ ಚೌಕಟ್ಟಿನಲ್ಲಿ ಬಂಧಿಸಿ, ಕಠಿಣ ಕ್ರಮ ಜರುಗಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಶಿವರಾಮ್ ಹೆಬ್ಬಾರ್ ಟ್ವೀಟ್ ಮಾಡಿದ್ದರು.
ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂ. ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ ಎಂದು ಚೇತನ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸಚಿವರಾಗಿ ಶಿವರಾಮ್ ಹೆಬ್ಬಾರ್, ತಮ್ಮ ವಿರುದ್ಧ ವೈಯುಕ್ತಿಕವಾಗಿ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕ ಸೇವಕರಾಗಿ ತನ್ನ ಪಾತ್ರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅದಕ್ಕೆ ಅವರು ಜವಾಬ್ದಾರರಾಗಬೇಕು ಎಂದು ಚೇತನ್ ಹೇಳಿದ್ದಾರೆ.