ಶೂಟಿಂಗ್​ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ಅವಘಡ: ನಟ ರಿಷಬ್ ಶೆಟ್ಟಿಗೆ ಬೆನ್ನು, ತಲೆಗೆ ಬೆಂಕಿ

ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ.

Published: 01st March 2021 12:40 PM  |   Last Updated: 01st March 2021 12:40 PM   |  A+A-


Rishab sjhetty

ರಿಷಭ್ ಶೆಟ್ಟಿ

Posted By : Shilpa D
Source : Online Desk

ಹಾಸನ: ಚಿತ್ರೀಕರಣದ ವೇಳೆ ನಟ ರಿಷಬ್ ಶೆಟ್ಟಿಗೆ ಬೆಂಕಿ ತಗುಲಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಬೇಲೂರಿನಲ್ಲಿ ಇತ್ತೀಚೆಗೆ ಚಿತ್ರೀಕರಣ ನಡೆಯುತ್ತಿದ್ದಾಗ ಈ ಅವಘಡ ಸಂಭವಿಸಿತ್ತು. ನಟ, ನಿರ್ದೇಶಕ ರಿಷಬ್ ಶೆಟ್ಟ ದೊಡ್ಡ ಗಂಡಾಂತರದಿಂದ ಪಾರಾಗಿದ್ದಾರೆ.

ರಿಷಬ್ ಶೆಟ್ಟಿ ಹಾಗೂ ನಟಿ ಗಾನವಿ ಸಾಹಸ ದೃಶ್ಯ ಚಿತ್ರೀಕರಣವೊಂದಕ್ಕೆ ಪೆಟ್ರೋಲ್ ಬಾಂಬ್ ಬಳಸಲಾಗಿತ್ತು.  ಮೊದಲ ಬಾಂಬ್ ಸಿಡಿದರೂ ಯಾವ ಸಮಸ್ಯೆಯೂ ಇರಲಿಲ್ಲ.

ಆದರೆ, ಎರಡನೇ ಬಾಂಬ್ ಸ್ಪೋಟಗೊಂಡಾಗ ರಿಷಬ್‌ ಕೊಂಚ ಯಾಮಾರಿದ್ರೆ ದೊಡ್ಡ ಅಪಾಯ ಕಾದಿತ್ತು. ಇದರಿಂದ ರಿಷಬ್‌ ಕೂದಲು ಸುಟ್ಟಿದೆ ಹಾಗೂ ಬೆನ್ನ ಮೇಲೆ ಗಾಯವಾಗಿದೆ. ಸಾಕಷ್ಟು ಮುಂಜಾಗ್ರತ ಕ್ರಮ ತೆಗದುಕೊಂಡಿದ್ದರಿಂದ ಹೆಚ್ಚಿನ ಅಪಾಯ ಸಂಭವಿಸಲಿಲ್ಲ ಎನ್ನಲಾಗಿದೆ. 

ಲಾಕ್‌ಡೌನ್‌ ವೇಳೆ ರಿಷಬ್ ಆಂಡ್ ಟೀಂ ಏನಾದರೂ ಮಾಡಲೇ ಬೇಕೆಂದು ಅತಿ ಕಡಿಮೆ ಅವಧಿಯಲ್ಲಿ ಸೀಮಿತ ಲೊಕೇಶನ್‌ನಲ್ಲಿ ಡಿಫರೆಂಟ್‌ ಆಗಿ 'ಹೀರೋ' ಸಿನಿಮಾ ರೆಡಿ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಚಿತ್ರದ ಟೈಲರ್‌ ರಿಲೀಸ್‌ ಆಗಿದ್ದು ವೀಕ್ಷಕರು ಶಾಕ್ ಆಗಿದ್ದಾರೆ. 

Stay up to date on all the latest ಸಿನಿಮಾ ಸುದ್ದಿ news
Poll
Kumbh-Covid-19

ಚುನಾವಣಾ ಸಮಾವೇಶ, ಕುಂಭಮೇಳ, ಧಾರ್ಮಿಕ ಸಭೆಗಳು ದೇಶದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಹದಗೆಡಿಸುತ್ತಿವೆಯೇ?


Result
ಹೌದು, ಅದು ನಿಜ.
ಇಲ್ಲ, ಖಂಡಿತ ಅಲ್ಲ.
flipboard facebook twitter whatsapp