
ಶಂಕರ್ ಗೌಡ
ಬೆಂಗಳೂರು: ಗೋವಿಂದಪುರ ಡ್ರಗ್ ಕೇಸ್ ಸಂಬಂಧ ಪೊಲೀಸರು ಕೆಂಪೇಗೌಡ ಚಿತ್ರ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
ಡಾಲರ್ಸ್ ಕಾಲೋನಿ 3ನೇ ಮುಖ್ಯ ರಸ್ತೆಯಲ್ಲಿರುವ ನಿರ್ಮಾಪಕನ ಕಚೇರಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಡ್ರಗ್ ಪೆಡ್ಲರ್ ಜೊತೆ ನಂಟು ಹೊಂದಿರುವ ಆರೋಪ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ಗೋವಿಂದಪುರ ಠಾಣೆಯ ಇನ್ಸ್ ಪೆಕ್ಟರ್ ಪ್ರಕಾಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಸರ್ಚ್ ವಾರೆಂಟ್ ಪಡೆದು ಶಂಕರ್ ಗೌಡ ಅವರಿಗೆ ಸೇರಿದ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಇತ್ತೀಚೆಗಷ್ಟೇ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಚಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಶಂಕರ್ ಗೌಡ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು ಎಂದು ಮಾಹಿತಿ ನೀಡಿದ್ದು ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.