
ತೆಲುಗು ನಟ ತನೀಶ್
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸರು ತೆಲುಗು ನಟ ತನೀಶ್ ಹಾಗೂ ಇತರ ಮೂವರನ್ನು ವಿಚಾರಣೆ ಒಳಪಡಿಸಿದ್ದಾರೆ.
ಇದಾಗಲೇ ಸಮನ್ಸ್ ನೀಡಲ್ಪಟ್ಟಿದ್ದ ನಾಲ್ವರು ಶನಿವಾರ ವಿಚಾರಣೆಗೆ ಹಾಜರಾಗಿದ್ದರು.
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಪೊಲೀಸರು ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ ಅವರನ್ನು ಬಂಧಿಸಿದ್ದರು ಮತ್ತು ನಂತರ ಇಬ್ಬರೂ ಸುಮಾರು ಮೂರು ತಿಂಗಳ ಜೈಲುವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅಲ್ಲದೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ಪ್ರಜೆಗಳು ಸೇರಿದಂತೆ ಹಲವಾರು ಜನರನ್ನು ಬಂಧಿಸಲಾಗಿದೆ