
ಕೋಟಿಗೊಬ್ಬ3
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ 'ಕೋಟಿಗೊಬ್ಬ 3' ಸಿನಿಮಾದ ಫ್ಯಾನ್ ಮೇಡ್ ಮೋಷನ್ ಪೋಸ್ಟರ್ ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದು, ಭಾರಿ ಹವಾ ಸೃಷ್ಟಿಸಿದೆ.
ಕೋಟಿಗೊಬ್ಬ 3 ಚಿತ್ರದ ಮೋಷನ್ ಪೋಸ್ಟರ್ ನ್ನು ಚಿತ್ರತಂಡ ಸಂಕ್ರಾಂತಿ ಹಬ್ಬದಂದು ಬಿಡುಗಡೆ ಮಾಡಿತ್ತು. ಇದೀಗ ಸುದೀಪ್ ಅಭಿಮಾನಿಗಳು ಚಿತ್ರಮಂದಿರದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ, ತಮ್ಮ ನೆಚ್ಚಿನ ನಟನ ಮೇಲಿನ ಅಭಿಮಾನವನ್ನು ಮೆರೆದಿದ್ದಾರೆ.
ಸುದೀಪ್ ಕೂಡಾ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಮೋಷನ್ ಪೋಸ್ಟರ್ ನ್ನು ಹಂಚಿಕೊಂಡಿದ್ದು, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
— Kichcha Sudeepa (@KicchaSudeep) March 29, 2021
ಕೋಟಿಗೊಬ್ಬ 3' ಸಿನಿಮಾದಲ್ಲಿ ಸುದೀಪ್ಗೆ ಜೋಡಿಯಾಗಿ ಮಲಯಾಳಂ ಚಿತ್ರರಂಗದ ಖ್ಯಾತ ನಟಿ ಮಡೋನ್ನಾ ಸೆಬ್ಬಾಸ್ಟೀನ್ ಅಭಿನಯಿಸಿದ್ದಾರೆ. ಇನ್ನುಳಿದಂತೆ ರವಿಶಂಕರ್, ಶ್ರದ್ಧಾ ದಾಸ್, ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಮುಂತಾದವರು ಕೂಡ ಇದ್ದಾರೆ.
ಈ ಸಿನಿಮಾವನ್ನು ಶಿವ ಕಾರ್ತಿಕ್ ನಿರ್ದೇಶಿಸಿದ್ದು, ಸೂರಪ್ಪ ಬಾಬು ಬಂಡವಾಳ ಹೂಡಿದ್ದಾರೆ. ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ.