ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೋದರ ಕೊರೋನಾದಿಂದ ನಿಧನ
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಕೇವಲ ಜನ ಸಾಮಾನ್ಯರಲ್ಲದೆ, ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಕೂಡ ತಮ್ಮವರನ್ನು ಕಳೆದುಕೊಂಡ ದುಖಃದಲ್ಲಿದ್ದಾರೆ. ಇದೀಗ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸೋದರ ಕೂಡ ಕೊರೋನಾದಿಂದ ಸಾವನ್ನಪ್ಪಿದ್ದಾರೆ.
Published: 03rd May 2021 07:26 PM | Last Updated: 03rd May 2021 07:26 PM | A+A A-

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸೋದರ ಕೋವಿಡ್ ನಿಂದ ಸಾವು
ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಎರಡನೇ ಅಲೆ ರಣಕೇಕೆ ಹಾಕುತ್ತಿದೆ. ಕೇವಲ ಜನ ಸಾಮಾನ್ಯರಲ್ಲದೆ, ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳು ಕೂಡ ತಮ್ಮವರನ್ನು ಕಳೆದುಕೊಂಡ ದುಖಃದಲ್ಲಿದ್ದಾರೆ. ಇದೀಗ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸೋದರ ಕೂಡ ಕೊರೋನಾದಿಂದ ಸಾವನ್ನಪ್ಪಿದ್ದಾರೆ.
ಅರ್ಜುನ್ ಜನ್ಯ ಸೋದರ ಕಿರಣ್ ಕೊರೋನಾಗೆ ಬಲಿಯಾಗಿದ್ದಾರೆ. ಈ ಕುರಿತು ಅರ್ಜುನ್ ಜನ್ಯ ಸಾಮಾಜಿಕ ತಾಣದಲ್ಲಿ ಬರೆದುಕೊಂಡಿದ್ದಾರೆ.
"ಈ ನೋವನ್ನು ನನಗೆ ತಡೆಯಲು ಆಗುತ್ತಿಲ್ಲ. ನನ್ನ ಕಡೇ ಉಸಿರಿರುವವರೆಗೆ ನನ್ನ ಉಸಿರಲ್ಲಿ ನೀನು ಇರುವೆ" ಎಂದು ಜನ್ಯ ತಮ್ಮ ಇನ್ ಸ್ಟಾಗ್ರಾಂನಲ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.
ಇದಕ್ಕೆ ಮುನ್ನ ಅರ್ಜುನ್ ಜನ್ಯ ಸಹ ಕೊರೋನಾ ಸೋಂಕಿಗೆ ತುತ್ತಾಗಿದ್ದು ಚೇತರಿಸಿಕೊಂಡಿದ್ದರೆನ್ನುವುದನ್ನು ನಾವಿಲ್ಲಿ ನೆನೆಯಬಹುದು.