ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಹೈದರಾಬಾದ್‌ನ ಕೇರ್ ಆಸ್ಪತ್ರೆಗೆ ಬಾಲಕೃಷ್ಣ ಅವರನ್ನು ದಾಖಲಿಸಲಾಗಿದ್ದು, ಅವರಿಗೆ ಭುಜದ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಬಾಲಕೃಷ್ಣ ಅವರು ಕಳೆದ ಆರು ತಿಂಗಳುಗಳಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಅದರಿಂದಾಗಿ ಭಾರ ಎತ್ತರುವುದಕ್ಕೂ ಆಗುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪರೀಕ್ಷೆ ಮಾಡಿದ್ದ ವೈದ್ಯರು, ಶಸ್ತ್ರಚಿಕಿತ್ಸೆಯ ಅಗತ್ಯವಿರುವುದಾಗಿ ತಿಳಿಸಿದ್ದರು.
ಮೂಲಗಳ ಪ್ರಕಾರ ಕೇರ್ ಆಸ್ಪತ್ರೆಯ ಡಾ.ರಘುವೀರ್ ರೆಡ್ಡಿ ಮತ್ತು ಡಾ.ಬಿ.ಎನ್. ಪ್ರಸಾದ್ ಅವರ ತಂಡವು ಸತತ ನಾಲ್ಕು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ಮಾಡಿದ್ದು, ಸದ್ಯ ಬಾಲಕೃಷ್ಣ ಅವರು ಆರೋಗ್ಯವಾಗಿದ್ದಾರೆ. ಕೆಲ ದಿನಗಳಲ್ಲಿ ಅವರನ್ನು ಆಸ್ಪತ್ರೆಯಿಂದ ಡಿಸಾರ್ಜ್ ಮಾಡುವುದಾಗಿ ತಿಳಿಸಲಾಗಿದೆ.
Advertisement