
ಪುನೀತ್ ರಾಜ್ ಕುಮಾರ್
ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಸಮಾಧಿಯ ದರ್ಶನಕ್ಕೆ ಅಭಿಮಾನಿಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಕಂಠೀರವ ಸ್ಟುಡಿಯೋದಲ್ಲಿ ಸರ್ಕಾರದ ವತಿಯಿಂದ ಅನುವು ಮಾಡಿಕೊಡಲಾಗಿದೆ.
ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆವರೆಗೆ ಅಪ್ಪು ಸಮಾಧಿ ದರ್ಶನ ಪಡೆಯಲು ಸರ್ಕಾರ ಅವಕಾಶ ನೀಡಿದೆ.
ನಿನ್ನೆ ರಾಜ್ ಕುಟುಂಬದಿಂದ ಪುನೀತ್ ರಾಜ್ ಕುಮಾರ್ ಸಮಾಧಿಗೆ ಹಾಲುತುಪ್ಪ ಬಿಡುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಸರ್ಕಾರ ಅವಕಾಶ ನೀಡಿದ ಹಿನ್ನೆಲೆಯಲ್ಲಿ ನೆಚ್ಚಿನ ನಟನ ಸಮಾಧಿಯನ್ನು ನೋಡಲು ರಾಜ್ಯ ನಾನಾ ಭಾಗಗಳಿಂದ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋ ಕಡೆ ಆಗಮಿಸುತ್ತಿದ್ದಾರೆ. ಅಭಿಮಾನಿಗಳಿಂದ ನೂಕುನುಗ್ಗಲು ಆಗಬಾರದು ಎಂಬ ಕಾರಣಕ್ಕೆ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ