ಅಪ್ಪು ಪುಣ್ಯ ಸ್ಮರಣೆ: ನಾಳೆ ಅರಮನೆ ಮೈದಾನದಲ್ಲಿ ಅಭಿಮಾನಿಗಳಿಗೆ ಅನ್ನ ಸಂತರ್ಪಣೆ
ಅಕಾಲಿಕವಾಗಿ ಎಲ್ಲರನ್ನೂ ಅಗಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.
Published: 08th November 2021 05:38 PM | Last Updated: 08th November 2021 07:02 PM | A+A A-

ಪುನೀತ್ ರಾಜ್ ಕುಮಾರ್ ಸಮಾಧಿ
ಬೆಂಗಳೂರು: ಅಕಾಲಿಕವಾಗಿ ಎಲ್ಲರನ್ನೂ ಅಗಲಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯ ಅಂಗವಾಗಿ ನಗರದ ಅರಮನೆ ಮೈದಾನದಲ್ಲಿ ಮಂಗಳವಾರ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ.
ಈ ಸಂದರ್ಭದಲ್ಲಿ ಯಾವುದೇ ಅಚಾತುರ್ಯ, ಅಹಿತಕರ ಘಟನೆ ನಡೆಯದಂತೆ ಹಾಗೂ ಆಗಮಿಸುವ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲ ಬಗೆಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಇದನ್ನು ಓದಿ: 'ಬೆಳಕು ಹೋದ ಮೇಲೆ ಕತ್ತಲು ಬರಲೇ ಬೇಕು, ಅದೇ ಜೀವನ, ಅದೇ ಅಲ್ವ ಸರ್ ವೈರಾಗ್ಯ ಅಂದಿದ್ದರು ಅಪ್ಪು': ರಮೇಶ್ ಅರವಿಂದ್
ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ತಿಥಿ ಕಾರ್ಯದ ಅಂಗವಾಗಿ ಅನ್ನ ಸಂತರ್ಪಣೆ ನೆರವೇರಲಿದೆ ಎಂದು ನಟ ಶಿವರಾಜ್ ಕುಮಾರ್ ಅವರು ಇಂದು ಮಾಹಿತಿ ನೀಡಿದ್ದಾರೆ.
ನಾಳೆ ಬೆಳಗ್ಗೆ 11.30 ರಿಂದ ಪ್ಯಾಲೇಸ್ ಗ್ರೌಂಡ್ನಲ್ಲಿ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿದ್ದು, ಏಕಕಾಲಕ್ಕೆ 5 ಸಾವಿರ ಜನರು ಕುಳಿತು ಊಟ ಮಾಡುವಂತಹ ವ್ಯವಸ್ಥೆ ಮಾಡಲಾಗಿದೆ.