ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆ

ಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ.
ದುನಿಯಾ ವಿಜಯ್
ದುನಿಯಾ ವಿಜಯ್

ಬೆಂಗಳೂರು: ಸಲಗ ಸಿನಿಮಾದ ಪ್ರತಿಕ್ರಿಯೆಯಿಂದ ಸಂತಸಗೊಂಡಿರುವ ನಟ ದುನಿಯಾ ವಿಜಯ್ ಟಾಲಿವುಡ್ ಗೆ ಪಾದಾರ್ಪಣೆ ಮಾಡುತ್ತಿರುವ ಸುದ್ದಿ ಹೊರಬಿದ್ದಿದೆ. 

ಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ. ಈ ಸಿನಿಮಾಗೆ NB107 ಎಂದು ಹೆಸರಿಡಲಾಗಿದ್ದು, ಪಾತ್ರವರ್ಗದಲ್ಲಿ ಶ್ರುತಿ ಹಾಸನ್ ನಟಿಸುತ್ತಿದ್ದಾರೆ. 

ದುನಿಯಾ ವಿಜಯ್ ಈ ಸಿನಿಮಾದಲ್ಲಿ ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಬೀಳಬೇಕಿದೆ. 

ರಾಯಲಸೀಮೆ ಪ್ರಾಂತ್ಯದಲ್ಲಿ ಚಿತ್ರೀಕರಣ ನಡೆಯಲಿದ್ದು, ನೈಜ ಘಟನೆಯನ್ನು ಆಧರಿಸಿದ ಸಿನಿಮಾ ಇದಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿಗೆ ಬಿಡುಗಡೆಯಾದ ಸಲಗ ಸಿನಿಮಾದಲ್ಲಿ ದುನಿಯಾ ವಿಜಯ್ ನಟನೆ ಮತ್ತು ನಿರ್ದೇಶನ ಜವಾಬ್ದಾರಿಯನ್ನೂ ಹೊತ್ತುಕೊಂಡಿದ್ದರು. ಸಲಗ ಸಿನಿಮಾವನ್ನು ಟಗರು ನಿರ್ಮಾಪಕ ಕೆ.ಪಿ ಶ್ರೀಕಾಂತ್ ನಿರ್ಮಾಣ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com