
ನಿಶಾನ್ ನಾಣಯ್ಯ ಮತ್ತು ಸೋನು ಗೌಡ
ವಿಕ್ರಮ್ ಪ್ರಭು ನಿರ್ಮಿಸಿ, ನಿರ್ದೇಶಿಸುತ್ತಿರುವ 'ವೆಡ್ಡಿಂಗ್ ಗಿಫ್ಟ್' ಚಿತ್ರದ ಶೂಟಿಂಗ್ ಆರಂಭವಾಗಿದೆ.
ರಾಜೇಂದ್ರ ಸಿಂಗ್ ಬಾಬು ಬಳಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ವಿಕ್ರಮ್ ಪ್ರಭು ಸ್ವತಂತ್ರ್ಯ ನಿರ್ದೇಶಕರಾಗಿ ಕೆಲಸ ಮಾಡುತ್ತಿದ್ದಾರೆ.
ನಿಶಾನ್ ನಾಣಯ್ಯ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದು, ನಾಯಕಿಯಾಗಿ ಸೋನು ಗೌಡ ಅಭಿನಯಿಸುತ್ತಿದ್ದಾರೆ. ಹಿರಿಯ ನಟಿ ಪ್ರೇಮಾ ನಾಲ್ಕು ವರ್ಷಗಳ ನಂತರ ನಮ್ಮ ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಕೆಲವು ಸಮಯದಲ್ಲಿ, ನಟಿಯರು ಕೇವಲ ಸಾಮಾನ್ಯ ನಾಯಕಿಯ ಪಾತ್ರದಿಂದ ಹೊರಬಂದು ಬದಲಾಗಬೇಕು: ಸೋನು ಗೌಡ
ಪವಿತ್ರಾ ಲೋಕೇಶ್, ಯಮುನಾ ಶ್ರೀನಿಧಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ನಮ್ಮ ಚಿತ್ರದ ಶೀರ್ಷಿಕೆ ಕೇಳುತ್ತಿದ್ದ ಹಾಗೆ, ಕೌಟುಂಬಿಕ ಚಿತ್ರ ಅನಿಸಬಹುದು ಆದರೆ, ಇದು ಡಾರ್ಕ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಚಿತ್ರ. ಬೆಂಗಳೂರು, ಚಿಕ್ಕಮಗಳೂರು, ಮಂಗಳೂರಿನಲ್ಲಿ 45 ದಿನಗಳ ಒಂದೇ ಹಂತದ ಚಿತ್ರೀಕರಣ ನಡೆಯಲಿದೆ' ಎಂದು ನಿರ್ದೇಶಕ ವಿಕ್ರಂಪ್ರಭು ತಿಳಿಸಿದ್ದಾರೆ.
ಬಾಲಚಂದ್ರ ಪ್ರಭು ಅವರು ವೆಡ್ಡಿಂಗ್ ಗಿಫ್ಟ್ ಚಿತ್ರದಲ್ಲಿ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದರೆ, ಉದಯ್ ಲೀಲಾ ಅವರ ಛಾಯಾಗ್ರಹಣವನ್ನು ನಿರ್ವಹಿಸಲಿದ್ದಾರೆ.