
ನಟ ದುನಿಯಾ ವಿಜಯ್ ತಂದೆ-ತಾಯಿ
ಬೆಂಗಳೂರು: ನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು.
ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ 7.30ರ ಸುಮಾರಿಗೆ ರುದ್ರಪ್ಪ ಅವರು ನಿಧನ ಹೊಂದಿದ್ದು ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆನೇಕಲ್ ನ ಕುಂಬಾರಹಳ್ಳಿಯಲ್ಲಿ ರುದ್ರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ. ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಕಳೆದ ಜುಲೈಯಲ್ಲಿ ಇಹಲೋಕ ತ್ಯಜಿಸಿದ್ದರು.