#MeToo ನಟಿ ಶ್ರುತಿ ಹರಿಹರನ್ಗೆ ಕಬ್ಬನ್ ಪಾರ್ಕ್ ಪೊಲೀಸರಿಂದ ನೋಟಿಸ್ ಜಾರಿ
ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ‘ಮೀಟೂ’ ಪ್ರಕರಣಕ್ಕೆ ಸಂಬಂಧಿಸಿ ನಟಿ ಶ್ರುತಿ ಹರಿಹರನ್ಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.
Published: 28th November 2021 10:19 AM | Last Updated: 28th November 2021 10:19 AM | A+A A-

ಶ್ರುತಿ ಹರಿಹರನ್
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಭಾರೀ ಸದ್ದು ಮಾಡಿದ್ದ ‘ಮೀಟೂ’ ಪ್ರಕರಣಕ್ಕೆ ಸಂಬಂಧಿಸಿ ನಟಿ ಶ್ರುತಿ ಹರಿಹರನ್ಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆಂದು ತಿಳಿದುಬಂದಿದೆ.
ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾವಿರುದ್ಧ ನಟಿ ಶ್ರುತಿ ಹರಿಹರನ್ ಅವರು ಈ ಹಿಂದೆ ದೌರ್ಜನ್ಯ ಆರೋಪ ಮಾಡಿದ್ದರು. ಈ ಸಂಬಂಧ 2018ರಲ್ಲಿ ಅರ್ಜುನ್ ಸರ್ಜಾ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ದೂರು ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ವಿರುದ್ಧ 354,354a ಮತ್ತು 506 ಐಪಿಸಿ ಅಡಿ ಕೇಸ್ ದಾಖಲು ಆಗಿತ್ತು. ತನಿಖೆ ವೇಳೆ ಯಾವೂದೇ ಸಾಕ್ಷ ಸಿಗದ ಹಿನ್ನೆಲೆ ಪೊಲೀಸರು ನ್ಯಾಯಾಲಯಕ್ಕೆ 'ಬಿ'ರಿಪೋರ್ಟ್ ಸಲ್ಲಿಸಲು ತಯಾರಿ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಮೂರು ವರ್ಷದ ಬಳಿಕ ಪ್ರಕರಣದ ತನಿಖೆಯು ಇದೀಗ ಅಂತಿಮ ಹಂತಕ್ಕೆ ತಲುಪಿದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣ ಸಂಬಂಧ ಸಾಕ್ಷ್ಯಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಟಿ ಶ್ರುತಿ ಹರಿಹರನ್ ಅವರಿಗೆ ನೋಡಿಸ್ ಜಾರಿ ಮಾಡಿದ್ದು, ನೋಟಿಸ್ ತಲುಪಿದ ಮೂರು ದಿನಗಳ ಒಳಗಾಗಿ ತನಿಖಾಧಿಕಾರಿಗಳು ಮುಂದ ಹಾಜರಾಗುವಂತೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.