
ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ ಚಿತ್ರದ ಸ್ಟಿಲ್
'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' ಎಂಬ ಹೊಸ ಚಿತ್ರದಲ್ಲಿ ಡಾಲಿ ಧನಂಜಯ್ ಹಾಗೂ ಅದಿತಿ ಪ್ರಭುದೇವ ನಟಿಸುತ್ತಿದ್ದಾರೆ.
ಶೇ. 30 ರ್ಷಟು ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಚಿತ್ರದ ಟೈಟಲ್ ಪೋಸ್ಟರ್ ರಿಲೀಸ್ ಆಗಿದೆ. ಬಿಡುಗಡೆಯಾಗಿರುವ ಟೈಟಲ್ ಪೋಸ್ಟರ್ ವಿಭಿನ್ನವಾಗಿದ್ದು, ನೀರಿನ ದಡದಲ್ಲಿ ಧನಂಜಯ್ ಒಂದು ಹೆಣ್ಣು ಮಗುವಿನೊಂದಿಗೆ ಕುಳಿತು ಏನೋ ಯೋಚನೆ ಮಾಡುತ್ತಾ ಕುಳಿತಿರುವ ದೃಶ್ಯ ಪೋಸ್ಟರ್‌ನಲ್ಲಿದೆ. ಚಿತ್ರಕ್ಕೆ ಕುಶಾಲ್ ಗೌಡ ಅವರು ಆ್ಯಕ್ಷನ್ ಕಟ್ ಹೇಳಿದ್ದು, ಇದಕ್ಕೂ ಮುನ್ನ 'ಕನ್ನಡಕ್ಕಾಗಿ ಒಂದನ್ನು ಒತ್ತಿ' ಚಿತ್ರವನ್ನು ನಿರ್ದೇಶಿಸಿದ್ದರು.
ಬಾಬಾಬುಡನ್ ಗಿರಿ, ಚಿಕ್ಕಮಗಳೂರು, ಕುದುರೆಮುಖ ಸೇರಿದಂತೆ ಅನೇಕ ಸುಂದರ ಸ್ಥಳಗಳಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಅದಿತಿ ಪ್ರಭುದೇವ ಕೂಡಾ ಈ ಚಿತ್ರದ ಕಥೆ ಹಾಗೂ ತಮ್ಮ ಪಾತ್ರವನ್ನು ಬಹಳ ಮೆಚ್ಚಿರುವುದಾಗಿ ಹೇಳಿಕೊಂಡಿದ್ದಾರೆ. 'ಒನ್ಸ್ ಅಪಾನ್ ಎ ಟೈಮ್ ಇನ್ ಜಮಾಲಿಗುಡ್ಡ' ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜನೆಯಿದೆ. 'ಟಗರು', 'ಸಲಗ' ಖ್ಯಾತಿಯ ಮಾಸ್ತಿ ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.
ಇದನ್ನೂ ಓದಿ: ಗುರುದತ್ತ ಗಾಣಿಗ ಮುಂದಿನ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಗೆ ಅದಿತಿ ಪ್ರಭುದೇವ ನಾಯಕಿ!
ಯಶ್ವಂತ್ ಶೆಟ್ಟಿ, ಹಿರಿಯ ನಟಿ ಭಾವನಾ, ತ್ರಿವೇಣಿ ರಾವ್, ಪ್ರಕಾಶ್ ಬೆಳವಾಡಿ ಹಾಗೂ ಇನ್ನಿತರರು ಚಿತ್ರದ ತಾರಾಬಳಗದಲ್ಲಿದ್ದಾರೆ. ಸದ್ಯ ಧನಂಜಯ್ ಅಭಿನಯದ 'ಬಡವ ರಾಸ್ಕಲ್'ಚಿತ್ರ ಡಿಸೆಂಬರ್ 24 ಕ್ರಿಸ್‌ಮಸ್ ಹಬ್ಬದಂದು ಬಿಡುಗಡೆಯಾಗಲಿದ್ದು, ಮಾನ್ಸೂನ್ ರಾಗ ಸೇರಿದಂತೆ ಹೆಡ್ ಬುಷ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.
ಡಾಲಿ ಧನಂಜಯ್ ಅಭಿನಯದ 'ಹೆಡ್ ಬುಷ್' ಸಿನಿಮಾಕ್ಕೆ ಅಗ್ನಿ ಶ್ರೀಧರ್ ಕತೆ ಬರೆದಿದ್ದು, ಶೂನ್ಯ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ಹಾಗೂ ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಿತ್ರದಲ್ಲಿ ಧನಂಜಯ್ ನೆಗೆಟಿವ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದು ಡಿಸೆಂಬರ್ 17 ಕ್ಕೆ ರಿಲೀಸ್ ಆಗಲಿದೆ.