ಅಭಿಮಾನಿಗಳ ಪ್ರೀತಿಯ 'ಅಪ್ಪು' ಪುನೀತ್ ರಾಜ್ ಕುಮಾರ್ ನಿಧನರಾಗಿ ಇಂದಿಗೆ ಒಂದು ತಿಂಗಳು: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ
ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ ಅಪ್ಪು ನಿಧನರಾಗಿ ಇಂದು ನವೆಂಬರ್ 29ಕ್ಕೆ ಒಂದು ತಿಂಗಳು. ಕಳೆದ ತಿಂಗಳು ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿ ಇಡೀ ಕರುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದರು.
Published: 29th November 2021 08:37 AM | Last Updated: 29th November 2021 01:27 PM | A+A A-

ಕಂಠೀರವ ಸ್ಟುಡಿಯೊದಲ್ಲಿರುವ ಅಪ್ಪು ಸಮಾಧಿ ಬಳಿ ಸೇರಿದ್ದ ಅಭಿಮಾನಿಗಳು(ಸಂಗ್ರಹ ಚಿತ್ರ)
ಬೆಂಗಳೂರು: ಸ್ಯಾಂಡಲ್ ವುಡ್ ನ ಪವರ್ ಸ್ಟಾರ್, ಅಭಿಮಾನಿಗಳ ಪ್ರೀತಿಯ ಅಪ್ಪು ನಿಧನರಾಗಿ ಇಂದು ನವೆಂಬರ್ 29ಕ್ಕೆ ಒಂದು ತಿಂಗಳು. ಕಳೆದ ತಿಂಗಳು ಅಕ್ಟೋಬರ್ 29ರಂದು ತೀವ್ರ ಹೃದಯಾಘಾತದಿಂದ ಹಠಾತ್ ನಿಧನರಾಗಿ ಇಡೀ ಕರುನಾಡನ್ನು ಶೋಕಸಾಗರದಲ್ಲಿ ಮುಳುಗಿಸಿ ಹೋಗಿದ್ದರು.
ಇದನ್ನೂ ಓದಿ: 'ಅಪ್ಪು ಅವರ ಕನಸೊಂದನ್ನು ಸಾಕಾರಗೊಳಿಸಲು ಮುಂದಾಗಿದ್ದೇವೆ, ನಿಮ್ಮ ಸಹಕಾರ ಎಂದಿನಂತಿರಲಿ': ಅಶ್ವಿನಿ ಪುನೀತ್ ರಾಜ್ ಕುಮಾರ್
ಅವರ ಪತ್ನಿ, ಮಕ್ಕಳು ಮತ್ತು ಕುಟುಂಬಸ್ಥರು ನಿಧಾನವಾಗಿ ದುಃಖದಿಂದ ಹೊರಬಂದು ಸಹಜ ಜೀವನ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಅಪ್ಪು ನಿಧನರಾಗಿ ಇಂದಿಗೆ ಒಂದು ತಿಂಗಳಾದ ಹಿನ್ನೆಲೆಯಲ್ಲಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಸೋದರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬಸ್ಥರು ಅಪ್ಪು ಸಮಾಧಿಯಿರುವ ಕಂಠೀರವ ಸ್ಟುಡಿಯೊಗೆ ತೆರಳಿ ಪೂಜೆ ಸಲ್ಲಿಸಿದರು.