
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ಸಿನಿಮಾಗೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ಅಕ್ಟೋಬರ್ 7 ರಂದು ಟ್ರೈಲರ್ ಬಿಡುಗಡೆಯಾಗುತ್ತಿದೆ.
ಈಗಾಗಲೇ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಿರುವ ಚಿತ್ರ ತಂಡ ಗುರುವಾರ ಸಿನಿಮಾ ಟ್ರೈಲರ್ ಬಿಡುಗಡೆ ಮಾಡುವುದಾಗಿ ಹೇಳಿದೆ. ಈ ಕುರಿತು ಕಿಚ್ಚ ಸುದೀಪ್ ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಶಿವ ಕಾರ್ತಿಕ್ ನಿರ್ದೇಶನದ ಕೋಟಿಗೊಬ್ಬ-3 ಸುದೀಪ್ ಗೆ ನಾಯಕಿಯಾಗಿ ಮಡೋನಾ ಸೆಬಾಸ್ಟಿಯನ್ ಅಭಿನಯಿಸಿದ್ದಾರೆ. ಶ್ರದ್ಧಾ ದಾಸ್, ಅಫ್ತಾಬ್ ಶಿವದಾಸನಿ, ರವಿಶಂಕರ್, ಆಶಿಕಾ ರಂಗನಾಥ್ ಮತ್ತಿತರ ತಾರಾ ಬಳಗವಿದೆ.
ಬಾಲಿವುಡ್ ನಟ ಅಫ್ತಾಬ್ ಶಿವದಾಸನಿ ಈ ಚಿತ್ರದ ಮೂಲಕ ಮೊದಲ ಬಾರಿಗೆ ಸ್ಯಾಂಡಲ್ ವುಡ್ ಪ್ರವೇಶಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಅವರ ಸಂಗೀತ ಸಂಯೋಜನೆಯಿದೆ.
Advertisement