The New Indian Express
ಬೆಂಗಳೂರು: ನಟ ಧ್ರುವ ಸರ್ಜಾ ಇಂದು ತಮ್ಮ ಹುಟ್ಟುಹಬ್ಬವನ್ನು ಮಾರ್ಟಿನ್ ಶೂಟಿಂಗ್ ಸ್ಥಳದಲ್ಲಿಯೇ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊ ಸಂದೇಶ ಪೋಸ್ಟ್ ಮಾಡಿರುವ ಧ್ರುವ ಸರ್ಜಾ ತಾವು ಹುಟ್ಟುಹಬ್ಬವನ್ನು ಭರ್ಜರಿಯಾಗಿ ಆಚರಿಸಿಕೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಅಭಿಮಾನಿಗಳು ತಮ್ಮ ಮನೆಯ ಮುಂದೆ ಗುಂಪುಗೂಡಬಾರದು ಎಂದು ವಿನಂತಿಸಿಕೊಂಡಿದ್ದಾರೆ.
ಇದನ್ನೂ ಓದಿ: 'ಟಗರು' ಯಶಸ್ಸಿನ ನಂತರ ಹೊಸ ಸಿನಿಮಾಗಾಗಿ ಸೂರಿ-ಶಿವರಾಜ್ ಕುಮಾರ್ ಮಾತುಕತೆ!
ಇದೇ ವೇಳೆ ಧ್ರುವ ಸರ್ಜಾ ಹುಟ್ಟುಹಬ್ಬ ಪ್ರಯುಕ್ತ ಮಾರ್ಟಿನ್ ಚಿತ್ರತಂಡ ಧ್ರುವ ಸರ್ಜಾ ಅವರ ಸ್ಪೆಷಲ್ ಪೋಸ್ಟರ್ ಬಿಡುಗಡೆಗೊಳಿಸಿದ್ದಾರೆ.
ಮಾರ್ಟಿನ್ ಸಿನಿಮಾವನ್ನು ಎ.ಪಿ ಅರ್ಜುನ್ ಅವರು ನಿರ್ದೇಶಿಸುತ್ತಿದ್ದಾರೆ. ಅಗಸ್ಟ್ ತಿಂಗಳಿನಿಂದ ಚಿತ್ರದ ಶೂಟಿಂಗ್ ಬಿಡುವಿಲ್ಲದಂತೆ ಸಾಗಿದೆ. ಅದ್ಧೂರಿ ಸಿನಿಮಾ ನಂತರ ನಿರ್ದೇಶಕ ಅರ್ಜುನ್ ಮತ್ತು ಧ್ರುವ ಸರ್ಜಾ ಮಾರ್ಟಿನ್ ಮೂಲಕ ಮತ್ತೆ ಒಂದಾಗಿದ್ದಾರೆ.
ಇದನ್ನೂ ಓದಿ: ಕೋಟಿಗೊಬ್ಬ-3 ಚಿತ್ರಕ್ಕೆ ಯು/ಎ ಸರ್ಟಿಫಿಕೇಟ್; ಗುರುವಾರ ಟ್ರೈಲರ್ ಬಿಡುಗಡೆ
ಮುಂದೆ ಧ್ರುವ ಸರ್ಜಾ ಅವರು ನಿರ್ದೇಶಕ ಪ್ರೇಮ್, ಜಗ್ಗು ದಾದ ನಿರ್ದೇಶಕ ರಾಘವೇಂದ್ರ ಹೆಗಡೆ ಮತ್ತು ಭಜರಂಗಿ ನಿರ್ದೇಶಕ ಹರ್ಷ ಅವರ ಸಿನಿಮಾಗಳಲ್ಲಿ ನಟಿಸಲಿದ್ದಾರೆ.
ಇದನ್ನೂ ಓದಿ: ಡಾಲಿ ಧನಂಜಯ್ ನಟನೆಯ ರತ್ನನ್ ಪ್ರಪಂಚ, ಅಕ್ಟೋಬರ್ 22 ರಂದು ಅಮೆಜಾನ್ ಪ್ರೈಮ್ ನಲ್ಲಿ ಬಿಡುಗಡೆ