ಸಲ್ಮಾನ್ ಖಾನ್ ಪ್ರಮುಖ ಪಾತ್ರದಲ್ಲಿ ನಟಿಸಿ, ನಿರ್ಮಾಣ ಮಾಡುತ್ತಿರುವ ಸಿನಿಮಾಗೆ ಕೆಜಿಎಫ್ ಸಿನಿಮಾ ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.
ಈ ಬಗ್ಗೆ ಅವರೇ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ’ಬಾಲಿವುಡ್ ಬಾಯಿಜಾನ್ ಸಲ್ಮಾನ್ ಖಾನ್ ಜೊತೆ ಕೆಲಸ ಮಾಡುತ್ತಿರುವುದು ನನಗೆ ಸಂತಸ ತಂದಿದೆ. ಅವರ ಸಿನಿಮಾದಲ್ಲಿ ಹಿನ್ನೆಲೆ ಸಂಗೀತ ಹಾಗೂ ಹಾಡುಗಳಿಗೆ ರಾಗ ಸಂಯೋಜನೆ ಮಾಡುತ್ತಿದ್ದೇನೆ. ನನ್ನ ಈ ಪಯಣಕ್ಕೆ ನಿಮ್ಮ ಬೆಂಬಲ ಇರಲಿ' ಎಂದು ಟ್ವೀಟ್ ಮಾಡಿದ್ದಾರೆ.
'ಕೆಜಿಎಫ್' ಸಿನಿಮಾದ ಬ್ರ್ಯಾಕ್‌ಗ್ರೌಂಡ್ ಸ್ಕೋರ್, ಹಾಡುಗಳು ಸಿಕ್ಕಾಪಟ್ಟೆ ಪ್ರಖ್ಯಾತಿ ಗಳಿಸಿದ್ದವು. ಅಂತೆಯೇ ರವಿ ಬಸ್ರೂರು ಅವರನ್ನರಸಿ ಸಾಕಷ್ಟು ಅವಕಾಶಗಳು ಬಂದವು. ಈಗ ಅವರು ಬಾಲಿವುಡ್‌ನ ಬಾಕ್ಸ್ ಆಫೀಸ್ ಸುಲ್ತಾನ ನಟ ಸಲ್ಮಾನ್ ಖಾನ್ ಜೊತೆಗೆ ಕೆಲಸ ಮಾಡುವ ಅವಕಾಶ ಗಳಿಸಿದ್ದಾರೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ರವಿ ಬಸ್ರೂರು ಮಾಹಿತಿ ನೀಡಿದ್ದಾರೆ.
Advertisement