ಕೋಟಿಗೊಬ್ಬ-3 ಬಿಡುಗಡೆ ವಿಳಂಬ: ಅಭಿಮಾನಿಗಳ ಕ್ಷಮೆ ಕೋರಿದ ಸುದೀಪ್

ಕೋಟಿಗೊಬ್ಬ-3 ಚಿತ್ರದ ಬಿಡುಗಡೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚಾ ಸುದೀಪ್ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ. 
ನಟ ಕಿಚ್ಚಾ ಸುದೀಪ್
ನಟ ಕಿಚ್ಚಾ ಸುದೀಪ್

ಬೆಂಗಳೂರು: ಕೋಟಿಗೊಬ್ಬ-3 ಚಿತ್ರದ ಬಿಡುಗಡೆ ವಿಳಂಬ ವಿಚಾರಕ್ಕೆ ಸಂಬಂಧಿಸಿದಂತೆ ನಟ ಕಿಚ್ಚಾ ಸುದೀಪ್ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

ಈ ಕುರಿತಂತೆ ಪತ್ರವೊಂದನ್ನು ಟ್ವೀಟ್ ಮಾಡಿರುವ ಸುದೀಪ್, ಕಾರಣಾಂತರಗಳಿಂದ ಕೋಟಿಗೊಬ್ಬ-3 ಚಿತ್ರ ಬಿಡುಗಡೆ ವಿಳಂಬವಾಗುತ್ತಿದೆ. ಅದರೆ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಬೇಕು. ಚಿತ್ರ ಬಿಡುಗಡೆ ವಿಳಂಬಕ್ಕೂ ಚಿತ್ರಮಂದಿರಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಥಿಯೇಟರ್ ಗಳ ಮುಂದೆ ಗಲಾಟೆ ಮಾಡದಂತೆ ಸುದೀಪ್ ಮನವಿ ಮಾಡಿದ್ದಾರೆ.

'ಈಗಾಗಲೇ ಥಿಯೇಟರ್‌ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ. ಕೆಲವರ ಬೇಜವಾಬ್ದಾರಿಯಿಂದ ಈ ರೀತಿ ಆಗಿದೆ. ಸಿನಿಮಾ ಮತ್ತೆ ಯಾವಾಗ ಪ್ರದರ್ಶನ ಆಗುತ್ತೆ ಅನ್ನೋದನ್ನ ಮತ್ತೆ ನಾನು ನಿಮಗೆ ತಿಳಿಸ್ತಿನಿ. ಹೊಸ ಸಮಯ ತಿಳಿಸುವುದು ನನ್ನ ಕರ್ತವ್ಯ ಅಲ್ಲಿಯವೆಗೂ ನೀವೆಲ್ಲ ತಾಳ್ಮೆಯಿಂದ ಇರಿ, ಸಿನಿಮಾ ರಿಲೀಸ್ ಆಗಿಲ್ಲ ಅಂತ ಥಿಯೇಟರ್ ಗಳಿಗೆ ಹಾನಿ ಮಾಡಬೇಡಿ.

ನಿಮ್ಮ ಪ್ರೀತಿಯ ಕಿಚ್ಚ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com