'ರಾಜಕುಮಾರ' ಪುನೀತ್ ಆರೋಗ್ಯ ಗಂಭೀರ: ನಗರದಲ್ಲಿ ಭಾರೀ ಪೊಲೀಸ್ ಭದ್ರತೆ
ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರ ನಿವಾಸ ಮತ್ತು ಆ ಪರಿಸರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
Published: 29th October 2021 02:27 PM | Last Updated: 29th October 2021 02:27 PM | A+A A-

ಪುನೀತ್ ರಾಜಕುಮಾರ್
ಬೆಂಗಳೂರು: ಸ್ಯಾಂಡಲ್ವುಡ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅವರ ನಿವಾಸ ಮತ್ತು ಆ ಪರಿಸರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಅಭಿಮಾನಿಗಳು ಸಾಗರೋಪಾದಿಯಲ್ಲಿ ವಿಕ್ರಮ್ ಆಸ್ಪತ್ರೆಯತ್ತ ಹರಿದು ಬರುತ್ತಿದ್ದಾರೆ. ರಾಜ್ಯದ್ಯಂತ ಕೂಡ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದೆ. ಅನೇಹ ಅಭಿಮಾನಿಗಳು ಉದ್ಬೇಗದಿಂದ ಜೋರಾಗಿ ಅಳುವುದು, ಕೂಗುವುದನ್ನು ಮಾಡುತ್ತಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದ ಜೊತೆಗೆ ರಾಜ್ಯದ್ಯಂತ ಕೂಡ ಪೊಲೀಸ್ ಭದ್ರತೆ ಹೆಚ್ಚಿಸಲಾಗುತ್ತಿದೆ.
ಪುನೀತ್ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರ ತಂಡ ಶ್ರಮಿಸುತ್ತಿದೆ. ಚಿಕಿತ್ಸೆ ಮುಂದುವರಿದಿದೆ ಎಂದು ಹೇಳಲಾಗಿದೆ.