ದಕ್ಷಿಣ ಕೊರಿಯಾದ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ 'ಪೆಡ್ರೋ' ಚಿತ್ರ ಆಯ್ಕೆ
ರಿಷಬ್ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ದಕ್ಷಿಣ ಕೊರಿಯಾದ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು, ಬುಸಾನ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.
Published: 02nd September 2021 01:18 PM | Last Updated: 02nd September 2021 01:18 PM | A+A A-

ಪೆಡ್ರೋ
ಬೆಂಗಳೂರು: ರಿಷಬ್ ಶೆಟ್ಟಿ ನಿರ್ಮಾಣದ ಹಾಗೂ ನಟೇಶ್ ಹೆಗಡೆ ನಿರ್ದೇಶನದ ‘ಪೆಡ್ರೋ’ ಸಿನಿಮಾ ದಕ್ಷಿಣ ಕೊರಿಯಾದ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆ ಆಗಿದ್ದು, ಬುಸಾನ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ ಕಾಣುತ್ತಿರುವ ಮೊದಲ ಕನ್ನಡದ ಸಿನಿಮಾ ಎಂಬ ಹೆಗ್ಗಳಿಕೆಯನ್ನು ಪಡೆದುಕೊಂಡಿದೆ.
ಈ ಕುರಿತು ಸಂತಸ ಹಂಚಿಕೊಂಡಿರುವ ರಿಷಬ್ ಶೆಟ್ಟಿಯವರು, ಏಷ್ಯಾದ ಅತಿದೊಡ್ಡ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ ಮೊದಲ ಕನ್ನಡ ಚಿತ್ರ ಇದಾಗಲಿದ್ದು, ಇದು ನಮ್ಮ ತಂಡಕ್ಕೆ ಹೆಮ್ಮೆಯ ಕ್ಷಣವಾಗಿದೆ ಎಂದು ಹೇಳಿದ್ದಾರೆ.
ಪೆಡ್ರೋ ಚಿತ್ರದ ಚಿತ್ರೀಕರಣ 2019ರಲ್ಲಿ ನಡೆದಿತ್ತು. ಇಡೀ ಚಿತ್ರವನ್ನು ಶಿರಸಿಯಲ್ಲಿ ನಡೆಸಲಾಗಿತ್ತು ಎಂದು ನಟೇಶ್ ಅವರು ಹೇಳಿದ್ದಾರೆ.
‘ಪೆಡ್ರೋ’ ಸಿನಿಮಾ ಈ ಮೊದಲು ಎನ್‌ಎಫ್‌ಡಿಸಿ ಫಿಲ್ಮ್ ಬಜಾರ್‌ನ ವರ್ಕ್ ಇನ್ ಪ್ರೊಗ್ರೆಸ್ ಲ್ಯಾಬ್‌ಗೆ ಆಯ್ಕೆ ಆಗಿ ಪ್ರಶಸ್ತಿ ಸಹ ಪಡೆದುಕೊಂಡಿತ್ತು. ಬುಸಾನ್ ಚಲನಚಿತ್ರೋತ್ಸವದಲ್ಲಿ ಈ ಸಿನಿಮಾ ಪ್ರಶಸ್ತಿ ಪಡೆದುಕೊಂಡರೆ ಹೊಸ ದಾಖಲೆ ಸೃಷ್ಟಿ ಆಗಲಿದೆ.
ಕೋವಿಡ್ ನಿಂದಾಗಿ ಸಿನಿಮಾ ಸಿದ್ಧವಿದ್ದರೂ ಪ್ರೇಕ್ಷಕರ ಮುಂದೆ ತರಲು ಚಿತ್ರತಂಡಕ್ಕೆ ಸಾಧ್ಯವಾಗಿಲ್ಲ. ಚಿತ್ರವು ಈ ವರ್ಷದ ಗೋಸ್ ಟು ಕೇನ್ಸ್ ಚಲನಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗೊಳ್ಳಬೇಕಿತ್ತು. ಆದರೆ, ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ಬಾರಿಯ ಚಲನಚಿತ್ರೋತ್ಸವ ರದ್ದುಗೊಂಡಿದೆ.
ಚಿತ್ರದಲ್ಲಿ ರಾಜ್ ಬಿ. ಶೆಟ್ಟಿ, ಗೋಪಾಲ ಹೆಗಡೆ, ರಾಮಕೃಷ್ಣ ಭಟ್, ಮೇಧಿನಿ ಕೆಳಮನೆ, ನಾಗರಾಜ ಹೆಗಡೆ ಮುಂತಾದವರು ನಟಿಸಿದ್ದಾರೆ.