ಚಿತ್ರೀಕರಣದ ವೇಳೆ ಕುದುರೆ ಸಾವು: ಮಣಿರತ್ನಂ ವಿರುದ್ಧ ಎಫ್‍ಐಆರ್ ದಾಖಲು

ಪೊನ್ನಿಯಿನ್ ಸೆಲ್ವನ್ ಚಿತ್ರದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮಣಿರತ್ನಂ
ಮಣಿರತ್ನಂ

ಮುಂಬೈ: ಪೊನ್ನಿಯಿನ್ ಸೆಲ್ವನ್ ಚಿತ್ರದ ಚಿತ್ರೀಕರಣದ ವೇಳೆ ಕುದುರೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪೊನ್ನಿಯನ್ ಸೆಲ್ವನ್ ಚಿತ್ರೀಕರಣದ ವೇಳೆ ಅಪಘಾತವಾಗಿ ಕುದುರೆ ಸಾವನ್ನಪ್ಪಿತ್ತು. ಹೀಗಾಗಿ ಈ ಸಂಬಂಧ ಚಿತ್ರ ನಿರ್ದೇಶಕ ಮಣಿರತ್ನಂ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೆ, ಆನಿಮಲ್ ವೆಲ್ ಫೇರ್ ಬೋರ್ಡ್ ವಿಚಾರಣೆಗೆ ಕರೆದಿದೆ.

ಆಗಸ್ಟ್​ 11ರಂದು ಯುದ್ಧ ಸನ್ನಿವೇಶದ ಚಿತ್ರೀಕರಣ ವೇಳೆ ತಲೆಗೆ ಪೆಟ್ಟಾಗಿ ಕುದುರೆ ಸಾವನ್ನಪ್ಪಿತ್ತು. ಚಿತ್ರೀಕರಣ ವೇಳೆ ಬಳಸುವ ಪ್ರಾಣಿಗಳಿಗೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳುವುದು ಚಿತ್ರತಂಡದ ಜವಾಬ್ಧಾರಿಯಾಗಿದೆ.

ಇನ್ನು ಅನಿಮಲ್ ವೆಲ್​ಫೇರ್ ಬೋರ್ಡ್​ ಆಫ್​ ಇಂಡಿಯಾ(AWBI) ಕುದುರೆ ಸಾವಿನ ಕುರಿತಾಗಿ ತನಿಖೆ ನಡೆಸಿ ವರದಿ ನೀಡುವಂತೆ ಹೈದರಾಬಾದ್​ನ ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದೆ. ಜೊತೆಗೆ ತಪ್ಪಿತಸ್ಥರಿಗೆ ಸೂಕ್ತವಾದ ಶಿಕ್ಷೆ ಆಗುವಂತೆ ಮಾಡಬೇಕೆಂದು ಆಗ್ರಹಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com