ಅಣ್ಣಾತ್ತೆ ಸಿನಿಮಾ ಸ್ಟಿಲ್
ಸಿನಿಮಾ ಸುದ್ದಿ
ರಜನಿಕಾಂತ್ ನಟನೆಯ ಅಣ್ಣಾತ್ತೆ ಸಿನಿಮಾ ಫಸ್ಟ್ ಲುಕ್ ರಿಲೀಸ್: 'ತಲೈವಾ' ಸ್ಟೈಲ್ ಗೆ ಅಭಿಮಾನಿಗಳು ಫಿದಾ!
ಗಣೇಶ ಚತುರ್ಥಿ ಪ್ರಯುಕ್ತ ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ‘ ಸಿನಿಮಾದ ಫಸ್ಟ್ ಲುಕ್ ಹಾಗೂ ಮೋಷನ್ ಫೋಸ್ಟರ್ ಬಿಡುಗಡೆಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.
ಮುಂಬಯಿ: ಗಣೇಶ ಚತುರ್ಥಿ ಪ್ರಯುಕ್ತ ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ‘ ಸಿನಿಮಾದ ಫಸ್ಟ್ ಲುಕ್ ಹಾಗೂ ಮೋಷನ್ ಫೋಸ್ಟರ್ ಬಿಡುಗಡೆಯಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿದೆ.
ಶುಕ್ರವಾರ ಮೋಷನ್ ಫೋಸ್ಟರ್ ಮತ್ತು ಫಸ್ಟ್ ಲುಕ್ ಬಿಡುಗಡೆಯಾಯಿತು. ಯುಟ್ಯೂಬ್‌ನಲ್ಲಿ ಮೋಷನ್ ಪೋಸ್ಟರ್ ಬಿಡುಗಡೆಯಾಗಿ 24 ಗಂಟೆಗಳಲ್ಲಿ 19 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಪಡೆದಿದೆ.
ಇನ್ನು ಫಸ್ಟ್‌ಲುಕ್ ಪೋಸ್ಟರ್‌ನಲ್ಲಿ ರಜನಿಕಾಂತ್ ಬಿಳಿ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್ ಲುಕ್ ನೀಡಿದ್ದಾರೆ. ರಜನಿಯ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ' ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಸನ್ ಪಿಕ್ಚರ್ಸ್‌ನ ಕಲಾನಿಧಿ ಮಾರನ್ ನಿರ್ಮಿಸುತ್ತಿದ್ದು, ಶಿವ ನಿರ್ದೇಶಿಸುತ್ತಿದ್ದಾರೆ. ನಯನತಾರಾ, ಕೀರ್ತಿ ಸುರೇಶ್, ಖುಷ್ಬೂ, ಮೀನಾ ಹಾಗೂ ಪ್ರಕಾಶ್ ರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ