ಯೋಗರಾಜ್ ಭಟ್ ಗಾಳಿಪಟ-2 ಶೂಟಿಂಗ್ ಸೆಪ್ಟೆಂಬರ್ 18 ರಿಂದ ಮತ್ತೆ ಶುರು

ಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು. 
ಗಾಳಿಪಟ ಸ್ಟಿಲ್
ಗಾಳಿಪಟ ಸ್ಟಿಲ್

ಬೆಂಗಳೂರು: ಪ್ರೇಕ್ಷಕರು ನಿರೀಕ್ಷಿಸುತ್ತಿದ್ದ ಗಾಳಿಪಟ 2 ಸಿನಿಮಾ ಚಿತ್ರೀಕರಣ ಸೆಪ್ಟೆಂಬರ್ 18ರಿಂದ ಮತ್ತೆ ಶುರುವಾಗುತ್ತಿದೆ. ಕೊರೊನಾ ಹಿನ್ನೆಲೆಯಲ್ಲಿ ಸಿನಿಮಾ ಶೂಟಿಂಗ್ ನಿಲ್ಲಿಸಲಾಗಿತ್ತು. ಕಝಕಿಸ್ತಾನದಲ್ಲಿ ಶೂಟಿಂಗ್ ಮಾಡಲ್ಪಟ್ಟ ಮೊದಲ ಕನ್ನಡ ಸಿನಿಮಾ ಎನ್ನುವ ಹೆಗ್ಗಳಿಗೆ ಈ ಸಿನಿಮಾದ್ದು. 

2008ರಲ್ಲಿ ಬಿಡುಗಡೆಯಾಗಿದ್ದ ಗಾಳಿಪಟ ಸಿನಿಮಾ ಹಿಟ್ ಆಗಿತ್ತು. ಆ ಚಿತ್ರದಲ್ಲಿ ಗಣೇಶ್, ದಿಗಂತ್ ಮತ್ತು ರಾಜೇಶ್ ಕೃಷ್ಣನ್ ಅಭಿನಯ ಪ್ರೇಕ್ಷಕರ ಮನಸೂರೆಗೊಂಡಿತ್ತು. 

ಇದೀಗ ಗಾಳಿಪಟ-2ನಲ್ಲಿ  ರಾಜೇಶ್ ಕೃಷ್ಣನ್ ಬದಲಿಗೆ ಲೂಸಿಯ ನಿರ್ದೇಶಕ ಪವನ್ ಕುಮಾರ್ ಅಭಿನಯಿಸುತ್ತಿದ್ದಾರೆ. ನಿರ್ದೇಶಕ ಪವನ್ ಕುಮಾರ್ ಈ ಹಿಂದೆ ಯೋಗರಾಜ್ ಭಟ್ಟರ ಮನಸಾರೆ ಮತ್ತು ಪಂಚರಂಗಿ ಸಿನಿಮಾಗಳಲ್ಲಿ ನಟಿಸಿದ್ದಾರೆ. 

ಸಿನಿಮಾದ ಶೇ.70 ಭಾಗದ ಶೂಟಿಂಗ್ ಈಗಾಗಲೇ ಪೂರ್ತಿಯಾಗಿದೆ. ಅನಂತ್ ನಾಗ್ ಈ ಸಿನಿಮಾದಲ್ಲಿ ಟೀಚರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎನ್ನುವುದನ್ನು ಭಟ್ಟರು ಈ ಹಿಂದೆಯೇ ಬಹಿರಂಗಪಡಿಸಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com