ಉಪೇಂದ್ರ ರೊಂದಿಗೆ ರಾಮ್ ಗೋಪಾಲ್ ವರ್ಮಾ ಹೊಸ ಚಿತ್ರ ಘೋಷಣೆ
ಉಪೇಂದ್ರ ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸರ್ಪ್ರೈಸ್ ಎದುರಾಗಿದೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ, ಉಪೇಂದ್ರಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
Published: 18th September 2021 12:45 PM | Last Updated: 18th September 2021 01:17 PM | A+A A-

ಉಪೇಂದ್ರ
ಉಪೇಂದ್ರ ಅವರ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸರ್ಪ್ರೈಸ್ ಎದುರಾಗಿದೆ. ಹಿಂದಿ, ತೆಲುಗು ಚಿತ್ರರಂಗದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ, ಉಪೇಂದ್ರಗೆ ಶುಭಾಶಯಗಳನ್ನು ತಿಳಿಸಿದ್ದಾರೆ.
ಜೊತೆಗೆ ಈ ಇಬ್ಬರ ಕಾಂಬಿನೇಷನ್ನಲ್ಲಿ ಆಕ್ಷನ್ ಚಿತ್ರವೊಂದು ಮೂಡಿಬರಲಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ. ಇದರಿಂದಾಗಿ ಅಭಿಮಾನಿಗಳು ಸಖತ್ ಥ್ರಿಲ್ ಆಗಿದ್ದಾರೆ.
ಉಪೇಂದ್ರ ಅವರಿಗೆ ಜನ್ಮದಿನದ ಶುಭಾಶಯಗಳು’ ಎಂದು ಆರ್‌ಜಿವಿ ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ಉಪೇಂದ್ರ ನಿರ್ದೇಶನದ ಹೊಸ ಚಿತ್ರದ ಘೋಷಣೆಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ನಟನಾಗುವುದಕ್ಕೂ ಮುನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ ಉಪೇಂದ್ರ ಅವರು ‘ಓಂ’, ‘ಶ್’ ನಂತಹ ಹಿಟ್ ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೀಗ ಮತ್ತೆ ನಿರ್ದೇಶನದತ್ತ ಉಪೇಂದ್ರ ಮುಖ ಮಾಡಿದ್ದಾರೆ. ಹೊಸ ಚಿತ್ರದ ಕುರಿತು ಉಪೇಂದ್ರ ಅವರು ಇನ್ನಷ್ಟೇ ಮಾಹಿತಿ ನೀಡಬೇಕಿದೆ.
HAPPY to announce that Me and @nimmaupendra are starting an action film VERY SOON and here’s wishing him MANY HAPPY RETURNS OF THE DAY #HappyBirthday #upendra pic.twitter.com/nFaNhZYYNt
— Ram Gopal Varma (@RGVzoomin) September 18, 2021