Source : The New Indian Express
ಬೆಂಗಳೂರು: ಸಾಲು ಸಾಲು ಸಿನಿಮಾ ಅವಕಾಶಗಳನ್ನು ಹೊಂದಿರುವ ನಟ ಉಪೇಂದ್ರ ಮಾಸ್ಟರ್ ಪೀಸ್ ನಿರ್ದೇಶಕ ಮಂಜು ಮಾಂಡವ್ಯ ಅವರ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಕಿಶೋರ್ ಪಾತಿಕೊಂಡ ಅವರು ಈ ಸಿನಿಮಾ ನಿರ್ಮಾಪಕರಾಗಿದ್ದಾರೆ.
ಇದನ್ನೂ ಓದಿ: ಪಿವಿ ಸಿಂಧು ಜೊತೆ ಬ್ಯಾಡ್ಮಿಂಟನ್ ಆಡಿದ ದೀಪಿಕಾ ಪಡುಕೋಣೆ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೆ
ಮಂಜು ಮಾಂಡವ್ಯ ಅವರ ನಿರ್ದೇಶನದಲ್ಲಿ ಮೂಡಿಬರಲಿರುವ ಈ ಸಿನಿಮಾ ಪ್ರಯೋಗಾತ್ಮಕವಾಗಿರಲಿದೆ ಎನ್ನುವ ಸುದ್ದಿ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮಂಜು ಅವರು ಉಪೇಂದ್ರ ಅವರ ಜೊತೆ ಸಿನಿಮಾ ಕುರಿತು ಮಾತುಕತೆ ನಡೆಸುತ್ತಿದ್ದು ಮುಂಬರುವ ದಿನಗಳಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಲಿದೆ.
ಉಪೇಂದ್ರ ಅವರು ಹೋಮ್ ಮಿನಿಸ್ಟರ್ ಸಿನಿಮಾದಲ್ಲಿಯೂ ನಟಿಸುತ್ತಿದ್ದಾರೆ. ನಿರ್ದೇಶಕ ಆರ್ ಚಂದ್ರು ಮತ್ತು ಉಪೇಂದ್ರ ಕಾಂಬಿನೇಷನ್ ನಲ್ಲಿ ಮೂಡಿಬಂಡಿರುವ 'ಕಬ್ಜಾ' ತೆರೆಗೆ ಬರಲು ಸಿದ್ಧವಾಗಿದೆ.
ಇದನ್ನೂ ಓದಿ: ವಿಷ್ಣುವರ್ಧನ್ ಎವರ್ ಗ್ರೀನ್ ಸಿನಿಮಾ 'ಬಂಧನ' ಸೀಕ್ವೆಲ್ ನಲ್ಲಿ ಆದಿತ್ಯ; ಮಗನ ಚಿತ್ರಕ್ಕೆ ರಾಜೇಂದ್ರ ಸಿಂಗ್ ಬಾಬು ನಿರ್ದೇಶನ