ಕನ್ನಡದ ನಟಿ ವಿಜಯಲಕ್ಷ್ಮಿಗೆ ಮಾತೃವಿಯೋಗ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ವಿಜಯಲಕ್ಷ್ಮಿ ತಾಯಿ 75 ವರ್ಷದ ವಿಜಯಾ ಸುಂದರಂ ಇಂದು ಕೊನೆಯುಸಿರೆಳೆದಿದ್ದಾರೆ.
ವಿಜಯಲಕ್ಷ್ಮಿ
ವಿಜಯಲಕ್ಷ್ಮಿ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ವಿಜಯಲಕ್ಷ್ಮಿ ತಾಯಿ 75 ವರ್ಷದ ವಿಜಯಾ ಸುಂದರಂ ಇಂದು ಕೊನೆಯುಸಿರೆಳೆದಿದ್ದಾರೆ.

ಕೆಲ ತಿಂಗಳುಗಳಿಂದ ನಟಿ ವಿಜಯಲಕ್ಷ್ಮಿ ತಮ್ಮ ತಾಯಿ ಹಾಗೂ ಅಕ್ಕನ ಅನಾರೋಗ್ಯದ ಕುರಿತು ಮಾಹಿತಿ ನೀಡಿ ಯಾರಾದರೂ ಆರ್ಥಿಕವಾಗಿ ನೆರವಾಗಿ ಎಂದು ವಿಡಿಯೋಗಳ ಮೂಲಕ ಅಂಗಲಾಚಿದ್ದರು.

ವಿಜಯಲಕ್ಷ್ಮಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿಲ್ಲವಾದರೂ, ಇಂತಹ ವಿಡಿಯೋಗಳಿಂದಾಗಿ ಸುದ್ದಿಯಲ್ಲಿದ್ದಾರೆ. ಅವರ ಸಹೋದರಿ ಉಷಾ ಅವರಿಗೆ ಅನಾರೋಗ್ಯ ಕಾಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ವಿಜಯಲಕ್ಷ್ಮಿಯವರಿಗೂ ಕೊವಿಡ್​ ಅಂಟಿತ್ತು. ಇದರಿಂದ ಅವರ ಆರೋಗ್ಯ ಗಂಭೀರವಾಗಿತ್ತು. ಈ ಬಗ್ಗೆ ವಿಡಿಯೋ ಮಾಡಿ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.

‘ನಾನು ತುಂಬಾ ನರಳುತ್ತಿದ್ದೇನೆ. ಐದು ದಿನದಿಂದ ಜ್ವರ ಬಂದಿದೆ. ಕಷ್ಟಪಟ್ಟು ಆಸ್ಪತ್ರೆಗೆ ಬಂದಿದ್ದೇನೆ. ನಾನು ಕೊವಿಡ್​ ಸೆಂಟರ್​ಗೆ ಹೋಗಬೇಕು. ಈ ಬಗ್ಗೆ ಕಲಾವಿದರ ಸಂಘಕ್ಕೆ ಮನವಿ ಮಾಡಿದ್ದೇನೆ. ನಾನು ಎಲ್ಲರ ಜತೆಯೂ ಮಾತನಾಡುತ್ತಾ ಇದ್ದೇನೆ. ಆದರೆ, ಪ್ರಯೋಜನ ಆಗುತ್ತಿಲ್ಲ. ನನಗೆ ಕೊವಿಡ್​ ನ್ಯುಮೋನಿಯಾ ಅಟ್ಯಾಕ್​ ಆಗಿದೆ. ನಾನು ಉಳಿಯುವ ರೀತಿ ಕಾಣುತ್ತಿಲ್ಲ. ಐದು ದಿನದಿಂದ ಊಟ ಸರಿಯಾಗಿ ಸಿಗುತ್ತಿಲ್ಲ. ನಾನು ಎಲ್ಲಿಯೂ ಹೋಗಿಲ್ಲ. ಕರ್ನಾಟಕದಲ್ಲೇ ಇದ್ದೇನೆ’ ಎಂದಿದ್ದರು.

ಸಹೋದರಿ ಉಷಾ ಬಗ್ಗೆಯೂ ವಿಡಿಯೋ ಮಾಡಿ ಹಾಕಿದ್ದರು. ಉಷಾ ತುಂಬಾ ವೀಕ್​​ ಆಗಿದ್ದಾರೆ. ಎರಡು ಮೂರು ದಿನದಿಂದ ನೆನಪು ಮಾಡಿಕೊಳ್ಳಲು ಕಷ್ಟಪಡುತ್ತಿದ್ದಾರೆ. ಮಾತನಾಡೋಕೆ ಆಗುತ್ತಿಲ್ಲ. ಸರ್ಜರಿ ಆದ ನಂತರ ಇಷ್ಟೆಲ್ಲ ಆಗಿದೆ. ಡಾಕ್ಟರ್​ ಜೊತೆ ಮಾತಾಡಿ ನನಗೆ ಸಾಕಾಗಿದೆ. ಯಾರೂ ಕೂಡ ಅವರು ಮಾಡಿರುವ ತಪ್ಪನ್ನು ಒಪ್ಪಿಕೊಳ್ಳುತ್ತಿಲ್ಲ. ಈಗ ಉಷಾ ಅವರಿಗೆ ಬೇರೆ ಕಡೆ ಚಿಕಿತ್ಸೆ ಕೊಡಿಸೋಕೆ ನಮ್ಮ ಬಳಿ ದುಡ್ಡಿಲ್ಲ. ನಾವೀಗ ಬಹಳ ನೋವಿನಲ್ಲಿ ಇದ್ದೇವೆ. ದಯವಿಟ್ಟು ನಮಗೆ ಆರ್ಥಿಕವಾಗಿ ಸಹಾಯ ಮಾಡಿ’ ಎಂದು ವಿಜಯಲಕ್ಷ್ಮಿ ಮನವಿ ಮಾಡಿಕೊಂಡಿದ್ದರು. ಇದಾದ ಕೆಲವೇ ತಿಂಗಳಲ್ಲಿ ಅವರಿಗೆ ಕೊವಿಡ್​ ಆಗಿತ್ತು. ಈಗ ತಾಯಿಯನ್ನು ಕಳೆದುಕೊಂಡಿದ್ದಾರೆ.

ವಿಜಯಲಕ್ಷ್ಮಿಯವರ ವಿಡಿಯೋಗಳನ್ನು ವೀಕ್ಷಿಸಿದ ಅಭಿಮಾನಿಯೊಬ್ಬರು ಅವರಿಗೆ ಮನೆ ನೀಡಿದ್ದರಾದರೂ, ಅಲ್ಲಿ ಜಿರಳೆ, ಹಲ್ಲಿಗಳು ಜಾಸ್ತಿಯಿರುವ ಕಾರಣ, ಎರಡು ದಿನಗಳ ಹಿಂದಷ್ಟೇ ಬೆಂಗಳೂರಿಗೆ ಮರಳಿದ್ದಾಗಿ ಹೇಳಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com