ಡಾರ್ಲಿಂಗ್ ಕೃಷ್ಣ ಮುಂದಿನ ಸಿನಿಮಾ ಟೈಟಲ್ ಫಿಕ್ಸ್: 'ದಿಲ್ ಪಸಂದ್' ಲಾಂಚ್ ಮಾಡಿದ ರವಿ ಚನ್ನಣ್ಣನವರ್!

ಡಾರ್ಲಿಂಗ್ ಕೃಷ್ಣ ಸಿನಿಮಾಗೆ ‘ದಿಲ್ ಪಸಂದ್’ ಎಂದು ಶೀರ್ಷಿಕೆ ಇಡಲಾಗಿದೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಟೈಟಲ್ ಅನಾವರಣಗೊಂಡಿದೆ.
ಕೃಷ್ಣ
ಕೃಷ್ಣ

ಡಾರ್ಲಿಂಗ್ ಕೃಷ್ಣ ಸಿನಿಮಾಗೆ ‘ದಿಲ್ ಪಸಂದ್’ ಎಂದು ಶೀರ್ಷಿಕೆ ಇಡಲಾಗಿದೆ. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಟೈಟಲ್ ಅನಾವರಣಗೊಂಡಿದೆ.
 
ಡಾರ್ಲಿಂಗ್​ ಕೃಷ್ಣ, ನಿಶ್ವಿಕಾ ಕಾಯ್ಡು ಮತ್ತು ಮೇಘಾ ಶೆಟ್ಟಿ ನಟಿಸಲಿರುವ ‘ದಿಲ್​ ಪಸಂದ್​’ ಸಿನಿಮಾದ ಸುದ್ದಿಗೋಷ್ಠಿ ಸೋಮವಾರ ನಡೆಯಿತು. ಮುಖ್ಯ ಅತಿಥಿಯಾಗಿ ರವಿ ಡಿ. ಚನ್ನಣ್ಣನವರ್​ ಆಗಮಿಸಿದ್ದರು. ಅವರ 13 ವರ್ಷಗಳ ಸೇವೆಯಲ್ಲಿ ಇದೇ ಮೊದಲ ಬಾರಿಗೆ ಒಂದು ಸಿನಿಮಾ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಂದಿದ್ದರು.

ಸುಮಂತ್ ಕ್ರಾಂತಿ ನಿರ್ಮಾಣದ ಸಿನಿಮಾಗೆ ಶಿವ ತೇಜಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ಜೊತೆಗೆ ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಇದು ಪಕ್ಕಾ ಲವ್ ಸ್ಟೋರಿ ಇರುವ ಸಿನಿಮಾ. ಅಕ್ಟೋಬರ್ 4 ರಿಂದ ಚಿತ್ರೀಕರಣ ಆರಂಭವಾಗಲಿದೆ.

ಸಿನಿಮಾದಲ್ಲಿ ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ, ಗಿರಿ ಮತ್ತು ಅರುಣ ಬಾಲರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅರ್ಜುನ್ ಜನ್ಯ ಅವರ ಸಂಗೀತದೊಂದಿಗೆ, ದಿಲ್‌ಪಸಂದ್ ಸಿನಿಮಾಗೆ ಶೇಖರ್ ಚಂದ್ರ ಛಾಯಾಗ್ರಹಣ ನಿರ್ವಹಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com