'ಪುಷ್ಪ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಫಸ್ಟ್ ಲುಕ್ ಬಿಡುಗಡೆ, ಭಿನ್ನ ಗೆಟಪ್ ನಲ್ಲಿ ಮಿಂಚಿದ ಕಿರಿಕ್ ಪಾರ್ಟಿ ಬೆಡಗಿ
ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ ಈಗಾಗಲೇ ದೇಶದಾದ್ಯಂತ ಸುದ್ದಿ ಮಾಡುತ್ತಿದೆ.
Published: 29th September 2021 11:02 AM | Last Updated: 29th September 2021 11:02 AM | A+A A-

ಪುಷ್ಪ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಗೆಟಪ್
ತೆಲುಗಿನಲ್ಲಿ ರಶ್ಮಿಕಾ ಮಂದಣ್ಣ ಮತ್ತು ಅಲ್ಲು ಅರ್ಜುನ್ ಅಭಿನಯದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ ಈಗಾಗಲೇ ದೇಶದಾದ್ಯಂತ ಸುದ್ದಿ ಮಾಡುತ್ತಿದೆ.
ಇಂದು ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಅವರ ಪಾತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಆಗಿದೆ. ರಶ್ಮಿಕಾ ಮಂದಣ್ಣ ತಮ್ಮ ಪಾತ್ರದ ಮೊದಲ ಲುಕ್ ಹಂಚಿಕೊಂಡಿದ್ದಾರೆ. ಚಿತ್ರದಲ್ಲಿ ಅವರ ಪಾತ್ರದ ಹೆಸರು ಶ್ರೀವಲ್ಲಿ. ರಶ್ಮಿಕಾ ತಮ್ಮ ವೃತ್ತಿ ಜೀವನದಲ್ಲಿಯೇ ಸಂಪೂರ್ಣ ಭಿನ್ನ ಗೆಟಪ್ನಲ್ಲಿ ಕಾಣಿಸಿಕೊಂಡಿದ್ದು, ಅವರ ನೂತನ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ವಿವಿಧ ಭಾಗಗಳಲ್ಲಿ ಚಿತ್ರ ತಯಾರಾಗುತ್ತಿದ್ದು, ಮೊದಲ ಭಾಗಕ್ಕೆ ‘ಪುಷ್ಪ ದಿ ರೈಸ್’ ಎಂದು ಹೆಸರಿಡಲಾಗಿದೆ. ಅಲ್ಲು ಅರ್ಜುನ್ ಚಿತ್ರಕ್ಕೆ ನಾಯಕ. ಖಳನಾಯಕನಾಗಿ ಫಹಾದ್ ಫಾಸಿಲ್ ನಟಿಸುತ್ತಿದ್ದಾರೆ. ಕನ್ನಡದ ಡಾಲಿ ಧನಂಜಯ್ ಕೂಡ ನಟಿಸುತ್ತಿದ್ದಾರೆ. ಈಗಾಗಲೇ ಚಿತ್ರತಂಡವು ಅಲ್ಲು ಅರ್ಜುನ್ ಹಾಗೂ ಫಹಾದ್ ಫಾಸಿಲ್ ಲುಕ್, ಟೀಸರ್ಗಳನ್ನು ಬಿಡುಗಡೆ ಮಾಡಿದೆ. ಒಂದು ಹಾಡು ಕೂಡ ಬಿಡುಗಡೆಯಾಗಿದೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
Srivalli #PushpaTheRise #ThaggedheLe