'ವಿಕಿಪೀಡಿಯ’ ಸಿನಿಮಾ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಯಶವಂತ್‌ ಎಂಟ್ರಿ!

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ವಿಕಿಪೀಡಿಯ’ ಸಿನಿಮಾದ ಕೆಲಸಗಳು ಸದ್ದಿಲ್ಲದೆ ಪೂರ್ಣಗೊಂಡಿದ್ದು, ಈಗಾಗಲೇ ಪ್ರಾದೇಶಿಕ ಸೆನ್ಸಾರ್‌ ಮಂಡಳಿಯಿಂದ ಸಿನಿಮಾಕ್ಕೆ “ಯು/ಎ’ ಪ್ರಮಾಣ ಪತ್ರ ಕೂಡ ಸಿಕ್ಕಿದೆ.
ವಿಕಿಪೀಡಿಯಾ ಸಿನಿಮಾ ಸ್ಟಿಲ್
ವಿಕಿಪೀಡಿಯಾ ಸಿನಿಮಾ ಸ್ಟಿಲ್
Updated on

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ವಿಕಿಪೀಡಿಯ’ ಸಿನಿಮಾದ ಕೆಲಸಗಳು ಸದ್ದಿಲ್ಲದೆ ಪೂರ್ಣಗೊಂಡಿದ್ದು, ಈಗಾಗಲೇ ಪ್ರಾದೇಶಿಕ ಸೆನ್ಸಾರ್‌ ಮಂಡಳಿಯಿಂದ ಸಿನಿಮಾಕ್ಕೆ “ಯು/ಎ’ ಪ್ರಮಾಣ ಪತ್ರ ಕೂಡ ಸಿಕ್ಕಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಶೀಘ್ರದಲ್ಲಿಯೆ “ವಿಕಿಪೀಡಿಯ’ವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಈ ಹಿಂದೆ ಕಿರುತೆರೆಯಲ್ಲಿ “ಸತ್ಯಂ ಶಿವಂ ಸುಂದರಂ’, “ಒಂದೂರಲ್ಲಿ ರಾಜರಾಣಿ’, “ಮಹಾದೇವಿ’, “ಶಾಂತಂ ಪಾಪಂ’, “ಯಾರೇ ನೀ ಮೋಹಿನಿ…’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ ಅನುಭವವಿರುವ ಯಶವಂತ್‌ “ವಿಕಿಪೀಡಿಯ’ ಸಿನಿಮಾ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಎಂಟ್ರಿ ನೀಡುತ್ತಿದ್ದಾರೆ. “ವಿಕಿಪೀಡಿಯ’ ಸಿನಿಮಾದಲ್ಲಿ ವಿಕಾಸ್‌ ಎಂಬ ಪಾತ್ರದಲ್ಲಿ ನಾಯಕ ಯಶವಂತ್‌ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಆಶಿಕಾ ಸೋಮಶೇಖರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

“ರಫ್ ಕಟ್‌ ಪ್ರೊಡಕ್ಷನ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ “ವಿಕಿಪೀಡಿಯ’ ಸಿನಿಮಾಕ್ಕೆ ನವ ನಿರ್ದೇಶಕ ಸೋಮು ಹೊಯ್ಸಳ ಆಕ್ಷನ್‌-ಕಟ್‌ ಹೇಳಿದ್ದಾರೆ. ಚಿತ್ರಕ್ಕೆ ಚಿದಾನಂದ್‌ ಹೆಚ್‌.ಕೆ ಛಾಯಾಗ್ರಹಣ, ರವಿಚಂದ್ರನ್‌ ಸಿ. ಸಂಕಲನವಿದೆ. ಚಿತ್ರದ ಹಾಡುಗಳಿಗೆ ರಾಕೇಶ್‌ ಯು. ಪಿ ಮತ್ತು ನಿಲೀಮ ರಾವ್‌ ಸಂಗೀತ ಸಂಯೋಜಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ “ವಿಕಿಪೀಡಿಯ’ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದು ಕೊಳ್ಳುತ್ತಿದೆ. ಇದರ ಬೆನ್ನಲ್ಲೆ ಸಿನಿಮಾದ “ತನು ಮನ…’ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ.  ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದ್ದು, ಚಿತ್ರವು ಆಗಸ್ಟ್ 26 ರಂದು ಬಿಡುಗಡೆಯಾಗಲಿದೆ ಮತ್ತು ಆಗಸ್ಟ್ 6 ರಂದು ಟ್ರೇಲರ್ ಬಿಡುಗಡೆಯಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com