ಮಾನ್ವಿತಾ ತಾಯಿ ಚಿಕಿತ್ಸೆಗೆ ಸೋನು ಸೂದ್ ನೆರವು: ಧನ್ಯವಾದ ಹೇಳಿದ 'ಕೆಂಡ ಸಂಪಿಗೆ' ನಟಿ

ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಾನ್ವಿತಾ ಕಾಮತ್, ಬಾಲಿವುಡ್ ನಟ ಸೋನು ಸೂದ್ ಅವರಿಗೆ ಧನ್ಯವಾದಗಳನ್ನು ತಿಳಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಾನ್ವಿತಾ ಹರೀಶ್
ಮಾನ್ವಿತಾ ಹರೀಶ್
Updated on

ಕನ್ನಡದಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ಮಾನ್ವಿತಾ ಕಾಮತ್, ಬಾಲಿವುಡ್ ನಟ ಸೋನು ಸೂದ್ ಅವರಿಗೆ ಧನ್ಯವಾದಗಳನ್ನು ತಿಳಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ತಮ್ಮ ತಾಯಿಯ ಚಿಕಿತ್ಸೆಗಾಗಿ ಸೋನು ನೆರವಾಗಿದ್ದನ್ನು ಅವರು ನೆನದಿದ್ದಾರೆ. ನನ್ನ ಕುಟುಂಬದ ಪಾಲಿನ ರಿಯಲ್ ಹೀರೋ ನೀವು ಎಂದು ಸೋನು ಸೂದ್ ಅವರನ್ನು ಗುಣಗಾನ ಮಾಡಿದ್ದಾರೆ.

ಏಪ್ರಿಲ್ ತಿಂಗಳಲ್ಲಿ ಮಾನ್ವಿತಾ ಅವರ ತಾಯಿಗೆ ಕಿಡ್ನಿ ಸಮಸ್ಯೆ ಆಗಿತ್ತು. ಚಿಕಿತ್ಸೆಗಾಗಿ ಒಳ್ಳೆಯ ವೈದ್ಯರನ್ನು ಸಲಹೆ ನೀಡಿ ಎಂದು ಅವರು ಪೋಸ್ಟ್ ಮಾಡಿಕೊಂಡಿದ್ದರು. ಇದನ್ನು ಗಮನಿಸಿದ್ದ ಮಂಗಳೂರಿನ ಸೋನು ಸೂದ್ ಟ್ರಸ್ಟ್, ಮಾನ್ವಿತಾ ಅವರನ್ನು ಸಂಪರ್ಕಿಸಿತ್ತು. ತಾಯಿಯ ಚಿಕಿತ್ಸೆಗೆ ಅಗತ್ಯವಿರುವ ನೆರವನ್ನು ನೀಡುವುದಾಗಿ ಫೌಂಡೇಷನ್ ತಿಳಿಸಿತ್ತು. ತಾನು ಕೊಟ್ಟ ಮಾತಿನಂತೆ ನೆರವಾಗಿದೆ. ಹಾಗಾಗಿಯೇ ಮಾನ್ವಿತಾ ಅವರು ಸೋನು ಅವರನ್ನು ನೆನೆದಿದ್ದಾರೆ.
 
ಸೋನು ಸೂದ್‌ ಅವರ ಈ ಕಾರ್ಯಕ್ಕೆ ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ ಮಾನ್ವಿತಾ, "ಈಗಷ್ಟೇ ಸೋನು ಸೂದ್ ಸರ್ ಅವರ ಜತೆಗೆ ಮಾತನಾಡಿದೆ. ಅವರು ನನ್ನ ತಾಯಿಗಾಗಿ ಮಾಡಿದ ಸಹಾಯಕ್ಕೆ ನಾನು ಮನಸ್ಪೂರ್ವಕವಾಗಿ ಧನ್ಯವಾದವನ್ನು ತಿಳಿಸುತ್ತೇನೆ. ನೀವು ನಿಜವಾಗಿಯೂ ಹೀರೊ ಸರ್. ತುಂಬು ಹೃದಯದ ಧನ್ಯವಾದಗಳು" ಎಂದು ಕೃತಜ್ಞತೆ ಸಲ್ಲಿಸಿದ್ದಾರೆ.

"ಫೌಂಡೇಷನ್‌ನ ಅಭಿಷೇಕ್‌ ರಾವ್‌ ಅವರಿಗೂ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನನ್ನ ಕಷ್ಟದ ಸಮಯದಲ್ಲಿ ಅವರು ಮಾಡಿದ ಸಹಾಯ ಸಣ್ಣದಲ್ಲ. ನಮ್ಮ ಈ ಬಿಕ್ಕಟ್ಟಿನ ಸಮಯದಲ್ಲಿ ಸೋನು ಸೂದ್‌ ಸರ್ ನಿಜವಾಗಿಯೂ ದೇವರಂತೆ ಬಂದರು. ಅವರಿಂದಲೇ ನನ್ನ ತಾಯಿ ಇಂದು ಚೇತರಿಸಿಕೊಂಡಿದ್ದಾರೆ" ಎಂದು ಮತ್ತೊಂದು ಟ್ವಿಟ್‌ ಮಾಡಿದ್ದಾರೆ.

2015ರಲ್ಲಿ ತೆರೆಗೆ ಬಂದ ‘ಕೆಂಡಸಂಪಿಗೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು ನಟಿ ಮಾನ್ವಿತಾ ಕಾಮತ್. ಈ ಚಿತ್ರದಿಂದ ಅವರಿಗೆ ದೊಡ್ಡ ಮಟ್ಟದ ಯಶಸ್ಸು ಸಿಕ್ಕಿತು. ನಂತರ ಹಲವು ಚಿತ್ರಗಳಲ್ಲಿ ಅವರು ನಟಿಸಿದರು. ‘ಟಗರು’ ಚಿತ್ರದಲ್ಲಿ ಮಾನ್ವಿತಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸದ್ಯ ಮೂರು ಚಿತ್ರಗಳಲ್ಲಿ ಅವರು ನಟಿಸುತ್ತಿದ್ದಾರೆ. ಈ ಮಧ್ಯೆ ಅವರ ಕುಟುಂಬದಲ್ಲಿ ಸಮಸ್ಯೆ ಒಂದು ಎದುರಾಗಿತ್ತು. ಇದಕ್ಕೆ ಸೋನು ಸೂದ್ ಫೌಂಡೇಷನ್ ಮೂಲಕ ಪರಿಹಾರ ಸಿಕ್ಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com