ಜೈಪುರ: ಸೊಹೈಲ್ ಜತೆ 'ಬಿಂದಾಸ್' ನಟಿ ಹನ್ಸಿಕಾ ಮೋಟ್ವಾನಿ ವಿವಾಹ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಿಂದಾಸ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟಿ ಹನ್ಸಿಕಾ ಮೋಟ್ವಾನಿ ಅವರು ಭಾನುವಾರ ತಮ್ಮ ಬಹುಕಾಲದ ಗೆಳೆಯ, ಉದ್ಯಮಿ ಸೋಹೈಲ್ ಕಥುರಿಯಾ ಜೊತೆ ದಾಂಪತ್ಯ...
ಹನ್ಸಿಕಾ ಮೋಟ್ವಾನಿ
ಹನ್ಸಿಕಾ ಮೋಟ್ವಾನಿ
Updated on

ಜೈಪುರ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಿಂದಾಸ್ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದ ನಟಿ ಹನ್ಸಿಕಾ ಮೋಟ್ವಾನಿ ಅವರು ಭಾನುವಾರ ತಮ್ಮ ಬಹುಕಾಲದ ಗೆಳೆಯ, ಉದ್ಯಮಿ ಸೋಹೈಲ್ ಕಥುರಿಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜೈಪುರದ ಮುಂದೋಟಾ ಕೋಟೆ ಮತ್ತು ಅರಮನೆಯಲ್ಲಿ ಈ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ಅದ್ಧೂರಿ ಮದುವೆಯ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ವರದಿಗಳ ಪ್ರಕಾರ, ಸಿಂಧಿ ಪದ್ಧತಿಯಂತೆ ಉತ್ತರ ಭಾರತದ ಬಿಂದಾಸ್ ಬೆಡಗಿಯ ಮದುವೆ ನಡೆದಿದೆ. ಹನ್ಸಿಕಾ ಮೋಟ್ವಾನಿ ಕ್ಲಾಸಿಕ್ ಕೆಂಪು ಲೆಹೆಂಗಾವನ್ನು ಧರಿಸಿದ್ದರು ಮತ್ತು ಸೊಹೈಲ್ ಅವರು ಶೆರ್ವಾನಿ ಮಿಂಚಿದ್ದಾರೆ.

ಡಿಸೆಂಬರ್ 2ರಂದು ವಿವಾಹ ಪೂರ್ವ ಕಾರ್ಯಕ್ರಮಗಳು ಶುರುವಾಗಿದ್ದವು. ಡಿಸೆಂಬರ್ 3ರಂದು ಸಂಗೀತ, ಮೆಹೆಂದಿ ಕಾರ್ಯಕ್ರಮವಿತ್ತು. ಡಿಸೆಂಬರ್ 4ರಂದು ಈ ಜೋಡಿ ಸಪ್ತಪದಿ ತುಳಿದಿದೆ. ಸೊಹೇಲ್ ಅವರು ಮುಂಬೈ ಮೂಲದ ಉದ್ಯಮಿಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com