ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್.ಕೆ ಭಗವಾನ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು!

ತೀವ್ರ ಅನಾರೋಗ್ಯಕ್ಕೀಡಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಸ್ ಕೆ ಭಗವಾನ್
ಎಸ್ ಕೆ ಭಗವಾನ್

ಬೆಂಗಳೂರು: ತೀವ್ರ ಅನಾರೋಗ್ಯಕ್ಕೀಡಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಎಸ್ ಕೆ ಭಗವಾನ್ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. 

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ 89 ವರ್ಷದ ಭಗವಾನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಡಾ. ಸಿಎನ್ ಮಂಜುನಾಥ್ ಹೇಳಿದ್ದಾರೆ. 

ಭಗವಾನ್ ಅವರು 1966ರಲ್ಲಿ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ್ದರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರರಾಗಿ ನಿರ್ದೇಶನ ಪ್ರಾರಂಭಿಸಿದ್ದರು. 

ಈ ಜೋಡಿ ಸುಮಾರು 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿತ್ತು. ಕಸ್ತೂರಿ ನಿವಾಸ, ಎರಡು ಕನಸು, ಚಂದನದ ಗೊಂಬೆ, ಹೊಸಬೆಳಕು ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನೀಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com