ರಾಜ್ ಬಿ ಶೆಟ್ಟಿ ಅಭಿನಯದ 'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಫಸ್ಟ್ ಲುಕ್ ಬಿಡುಗಡೆ
ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ನಿರ್ಮಾಣ ಮಾಡುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ನಾಯಕ ಕಂ ನಿರ್ದೇಶಕ ರಾಜ್ ಬಿ ಶೆಟ್ಟಿ ಅವರು ಲುಕ್ ಅನಾವರಣಗೊಂಡಿದೆ.
ಪ್ರಕೃತಿಯ ಮಡಿಲಿಲ್ಲ ಒಂದು ರೀತಿಯ ಸಂತನಂತೆ ಅವರು ಕಂಡಿದ್ದಾರೆ. ಮೊನ್ನೆಯಷ್ಟೇ ಈ ಸಿನಿಮಾದ ನಾಯಕಿಯ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿತ್ತು. ಇದೀಗ ನಾಯಕನ ಫೋಟೋವನ್ನು ಬಿಡುಗಡೆಗೊಳಿಸಲಾಗಿದೆ.
ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ರಮ್ಯಾ ಮತ್ತು ರಾಜ್ ಬಿ ಶೆಟ್ಟಿ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸುವುದರ ಜೊತೆಗೆ ನಿರ್ದೇಶಕನಾಗಿಯೂ ಕೆಲಸ ಮಾಡಿದ್ದಾರೆ. ಈಗಾಗಲೇ ಸಂಪೂರ್ಣ ಚಿತ್ರೀಕರಣ ಕೂಡ ಮುಗಿಸಿದೆ ಚಿತ್ರತಂಡ. ರಮ್ಯಾ ಅವರ ಚೊಚ್ಚಲು ನಿರ್ಮಾಣದ ಸಿನಿಮಾ ಇದಾಗಿದ್ದರಿಂದ ಅತೀವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ.
ಒಂದು ಮೊಟ್ಟೆಯ ಕಥೆ ಮತ್ತು ಗರುಡ ಗಮನ ವೃಷಭ ವಾಹನದ ನಂತರ ರಾಜ್ ಬಿ ಶೆಟ್ಟಿ ಅವರ ಮೂರನೇ ನಿರ್ದೇಶನದ ಚಿತ್ರ ಇದಾಗಿದೆ. ಸ್ವಾತಿ ಮುತ್ತಿನ ಮಳೆ ಹನಿ ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ನಿರ್ದೇಶಕರು ನಮಗೆ ನೀಡಿದ ಹಿಂದಿನ ಸಂದರ್ಶನದಲ್ಲಿ ತಂಡವು ಸರಳವಾದ ಸ್ಥಳಗಳನ್ನು ಆಯ್ಕೆ ಮಾಡಿದೆ ಮತ್ತು ಕಡಿಮೆ ಸಮಯದಲ್ಲಿ ಚಿತ್ರೀಕರಣವನ್ನು ಪೂರ್ಣಗೊಳಿಸಲು ಸಾಧ್ಯವಾಗಿಸಿತು ಎಂದು ಹೇಳಿದ್ದರು.
ಸ್ವಾತಿ ಮುತ್ತಿನ ಮಳೆ ಹನಿಯೇ ರಮ್ಯಾ ಅವರ ಕಮ್ ಬ್ಯಾಕ್ ಚಿತ್ರವಾಗಬೇಕಿತ್ತು. ಆದಾಗ್ಯೂ, ಕೊನೆಯ ಕ್ಷಣದ ಕೆಲವು ಬದಲಾವಣೆಗಳಿಂದಾಗಿ, ರಮ್ಯಾ ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಯೋಜನೆಯನ್ನು ನಿರ್ಮಿಸಲು ನಿರ್ಧರಿಸಿದರು.
ಸ್ವಾತಿ ಮುತ್ತಿನ ಮಳೆ ಹನಿ ಚಿತ್ರದಲ್ಲಿ ಬಾಲಾಜಿ ಮನೋಹರ್, ಸೂರ್ಯ ವಸಿಷ್ಟ ಮತ್ತು ರೇಖಾ ಕೂಡ್ಲಿಗಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಮಿಧುನ್ ಮುಕುಂದನ್ ಅವರ ಸಂಗೀತ ಮತ್ತು ಪ್ರವೀಣ್ ಶ್ರೀಯಾನ್ ಅವರ ಛಾಯಾಗ್ರಹಣವಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ