ಚಂದನ್ ಶೆಟ್ಟಿ 'ಸೂತ್ರಧಾರಿ'ಗೆ ಸಲಗ ಖ್ಯಾತಿಯ ಸಂಜನಾ ಆನಂದ್ ನಾಯಕಿ!
ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ಸೂತ್ರಧಾರಿ ಚಿತ್ರಕ್ಕೆ ನಾಯಕಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ತಮ್ಮ ಹಾಡುಗಳ ಮೂಲಕ ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಸಿನಿಮಾವಿದು.
ನವರಸನ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೆ ಶೇಕಡಾ 90ರಷ್ಟು ಸಿನೆಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ. ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ಆಗಿದ್ದು ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ.
ಈ ಹಾಡಿನಲ್ಲಿ ಮೊದಲ ಬಾರಿಗೆ ಚಂದನ್ ಶೆಟ್ಟಿ ಜೋಡಿಯಾಗಿ ಸಲಗ ಖ್ಯಾತಿಯ ಸಂಜನಾ ಆನಂದ್ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಈ ಹಾಡನ್ನು ಇದೇ ಡಿಸೆಂಬರ್ 27ರಂದು ಬೆಳಗ್ಗೆ 10.35ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಈ ಹಾಡು ಹೊಸ ವರ್ಷದ ಸಂಭ್ರಮಾಚರಣೆಗೆ ಹೇಳಿ ಮಾಡಿಸಿದ ಹಾಗಿದೆ ಎಂದಿದ್ದಾರೆ ನಿರ್ಮಾಪಕ ನವರಸನ್. ಹಿರಿಯನಟ ತಬಲಾ ನಾಣಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ