ತಿರುವನಂತಪುರ: ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಜುಲೈ 4 ರಂದು ಅಯ್ಯಂತೊಳೆ ಎಸ್‌ಎನ್ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ಸದ್ಯ ಶ್ರೀಜಿತ್ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿದ ಬಳಿಕ ರವಿ ಅವರನ್ನು ಬಂಧಿಸಲಾಗಿದೆ. ಇಬ್ಬರು ಮಕ್ಕಳ ಪೋಷಕರು ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 2016ರಲ್ಲಿ ಪಾಲಕ್ಕಾಡ್ ಪೊಲೀಸರು ಇಂತಹದೇ ಪ್ರಕರಣದಲ್ಲಿ ರವಿಯನ್ನು ಬಂಧಿಸಿದ್ದರು.
ಹಿರಿಯ ನಟ ಟಿ.ಜಿ. ರವಿ ಅವರ ಪುತ್ರರಾಗಿರುವ ಶ್ರೀಜಿತ್ ರವಿ ವಿರುದ್ಧ ಇದೀಗ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜುಲೈ 4 ರಂದು ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ ಶ್ರೀಜಿತ್ ಕಾರಿನಿಂದ ಕೆಳಗಿಳಿದು ಗುಪ್ತಾಂಗವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ.
Advertisement