ಹೃದಯ ಸಂಬಂಧಿ ಸಮಸ್ಯೆ: ತಮಿಳು ನಟ ಚಿಯಾನ್ ವಿಕ್ರಮ್ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ ಎಂದ ವೈದ್ಯರು!

ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಪರೀಕ್ಷಿಸಿರುವ ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.
ವಿಕ್ರಮ್
ವಿಕ್ರಮ್
Updated on: 

ಚೆನ್ನೈ: ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರನ್ನು ಪರೀಕ್ಷಿಸಿರುವ ವೈದ್ಯರು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿದ್ದಾರೆ.

ಚೆನ್ನೈ ಕಾವೇರಿ ಆಸ್ಪತ್ರೆಗೆ ವಿಕ್ರಮ್ ದಾಖಲಾಗಿದ್ದು ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

​ಇದೇ ವಿಚಾರವಾಗಿ ವಿಕ್ರಮ್ ಪುತ್ರ ಧ್ರುವ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ಅಪ್ಪ ವಿಕ್ರಮ್ ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಆಸ್ಪತ್ರೆ ಬಂದಿದ್ದಾರೆ. ವೈದ್ಯರು ಚಿಕಿತ್ಸೆ ನೀಡಿದ್ದು ಅವರ ಆರೋಗ್ಯ ಸ್ಥಿರವಾಗಿದೆ. ಅವರಿಗೆ ಹೃದಯಾಘಾತವಾಗಿಲ್ಲ.. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಂತೆಯೇ ಈ ಸಂದರ್ಭದಲ್ಲಿ ನಾವು ಕುಟುಂಬದ ಖಾಸಗಿತನ ಕೇಳುತ್ತೇವೆ. ಈ ಸಂದರ್ಭದಲ್ಲಿ ಅಪ್ಪನಿಗೆ ಇದು ಅತ್ಯಗತ್ಯ ಕೂಡ.. ಅಪ್ಪ ಆರೋಗ್ಯವಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಊಹಾಪೋಹಗಳಿಗೆ ದಯ ಮಾಡಿ ಯಾರೂ ದಾರಿ ಮಾಡಿಕೊಡಬೇಡಿ ಎಂದು ಧ್ರುವ್ ಮನವಿ ಮಾಡಿದ್ದಾರೆ.

ಇನ್ನು ಮಣಿರತ್ನಂ ನಿರ್ದೇಶನದ ಪೊನ್ನಿಯಿನ್ ಸೆಲ್ವನ್ ಚಿತ್ರದಲ್ಲಿ ನಟಿಸುತ್ತಿದ್ಚಿದು, ಚಿತ್ರದ ಟೀಸರ್ ಇಂದು ಸಂಜೆ ಬಿಡುಗಡೆಯಾಗಬೇಕಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com