ಚೆನ್ನೈ: ಹಿರಿಯ ನಟ ಪ್ರತಾಪ್ ಪೋತೆನ್ ಅಪಾರ್ಟ್ ಮೆಂಟ್ ನಲ್ಲಿ ಶವವಾಗಿ ಪತ್ತೆ

ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪ್ರತಾಪ್ ಪೋತೆನ್
ಪ್ರತಾಪ್ ಪೋತೆನ್
Updated on: 

ಚೆನ್ನೈ: ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್ ಪೋಥೆನ್ ಮೃತ ದೇಹವನ್ನು ಬೆಡ್‌ರೂಮ್‌ನಲ್ಲಿ ನೋಡಿ ಶಾಕ್ ಆಗಿದ್ದಾರೆ.

100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್‌ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ ಕರೆ ತಂದರು. 1980ರಲ್ಲಿ ಲೋರಿ ಮತ್ತು ಚಮರಮ್ ಸಿನಿಮಾದಲ್ಲಿ ಪ್ರತಾಪ್ ಹೆಚ್ಚಿನ ಗಮನ ಸೆಳೆದ್ದರು.

1952 ಆಗಸ್ಟ್ 13ರಂದು ಪ್ರತಾಪ್ ಜನನವಾಯಿತು. ಮದ್ರಾಸ್‌ನಲ್ಲಿ ಪ್ರತಾಪ್ ಶಿಕ್ಷಣ ಪಡೆದರು. ಸಿನಿಮಾದಲ್ಲಿ ನಟಿಸುವ ಮುನ್ನ ಪ್ರತಾಪ್ ಅವರು ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ನೂರಕ್ಕೂ ಅಧಿಕ ಚಿತ್ರಗಳಲ್ಲಿ ಪ್ರತಾಪ್ ಬಣ್ಣ ಹಚ್ಚಿದ್ದಾರೆ.

1985ರಲ್ಲಿ ನಟಿ ರಾಧಿಕಾ ಅವರನ್ನು ಪ್ರತಾಪ್ ಮದುವೆಯಾದರು. 1986ರಲ್ಲಿ ಈ ಜೋಡಿ ದೂರ ದೂರ ಆಯ್ತು. 1990ರಲ್ಲಿ ಅಮಲಾ ಸತ್ಯನಾಥ್ ಎಂಬುವವರನ್ನು ಪ್ರತಾಪ್ ಮದುವೆಯಾದರು. ಈ ಜೋಡಿಗೆ ಒಬ್ಬಳು ಮಗಳಿದ್ದಾಳೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com