ಪ್ರಜ್ವಲ್ ದೇವರಾಜ್ ನಟನೆಯ 'ಅಬ್ಬರ' ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಅಬ್ಬರ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಆಗಸ್ಟ್ 12ರಂದು ಅಬ್ಬರ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ.
ಪ್ರಜ್ವಲ್ ದೇವರಾಜ್
ಪ್ರಜ್ವಲ್ ದೇವರಾಜ್

ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಅಬ್ಬರ ಸಿನಿಮಾದ ಟೀಸರ್ ಬಿಡುಗಡೆಯಾಗಿದ್ದು, ಆಗಸ್ಟ್ 12ರಂದು ಅಬ್ಬರ ಚಿತ್ರ ರಾಜ್ಯಾದ್ಯಂತ ತೆರೆಕಾಣಲಿದೆ.

ಈ ಹಿಂದೆ ಟೈಸನ್ ಮತ್ತು ಕ್ರ್ಯಾಕ್ ಮುಂತಾದ ಸಿನಿಮಾಗಳನ್ನು ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ನಿರ್ದೇಶಕ ರಾಮ್ ನಾರಾಯಣ್ ಅಬ್ಬರ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ.

ನಿಮಿಕಾ ರತ್ನಾಕರ್, ಲೇಖಾ ಚಂದ್ರು ಮತ್ತು ರಾಜಶ್ರೀ ನಾಯಕಿಯರಾಗಿ ನಟಿಸಿರುವ ಚಿತ್ರದಲ್ಲಿ ಪ್ರಜ್ವಲ್ ಐದು ವಿಭಿನ್ನ ಶೇಡ್ ಗಳಲ್ಲಿಕಾಣಸಿಕೊಂಡಿದ್ದಾರೆ. ರವಿಶಂಕರ್  ಖಳನಾಯಕನಾಗಿ ನಟಿಸಿದ್ದಾರೆ. ಅಬ್ಬರದಲ್ಲಿ ಶೋಭರಾಜ್ ಮತ್ತು ಕೋಟೆ ಪ್ರಭಾಕರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಚಿತ್ರದ ಹಾಡುಗಳಿಗೆ ರವಿ ಬಸ್ರೂರು ಅದ್ಭುತವಾದ ಸಂಗೀತ ನೀಡಿದ್ದಾರೆ. ಜೆ.ಕೆ.ಗಣೇಶ್ ಅವರ ಛಾಯಾಗ್ರಹಣ, ವೆಂಕಟೇಶ್ ಯುಡಿವಿ ಅವರ ಸಂಕಲನ, ವಿನೋದ್, ಪಳನಿರಾಜ್,ಮಾಸ್‌ ಮಾದ ಅವರ ಸಾಹಸ, ರಾಮು, ಮೋಹನ್, ಕಲೈ, ಭೂಷಣ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಬಸವರಾಜ್ ಮಂಚಯ್ಯ ಈ ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com