ಕಾಂತಾರ ಭರ್ಜರಿ ಯಶಸ್ಸು: 300 ಕೋಟಿ ರೂ. ಕಲೆಕ್ಷನ್

ಕಾಂತಾರ ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಭರ್ಜರಿ ಯಶಸ್ಸು ತಂದು ಕೊಟ್ಟಿದೆ. ಸೆಪ್ಟಂಬರ್ 30 ರಂದು ರಿಲೀಸ್ ಆಗಿದ್ದ ಕಾಂತಾರ ಸಿನಿಮಾ 300 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ.
ಕಾಂತಾರ ಸಿನಿಮಾ ಸ್ಟಿಲ್
ಕಾಂತಾರ ಸಿನಿಮಾ ಸ್ಟಿಲ್
Updated on

ಕಾಂತಾರ ಸಿನಿಮಾ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಭರ್ಜರಿ ಯಶಸ್ಸು ತಂದು ಕೊಟ್ಟಿದೆ. ಸೆಪ್ಟಂಬರ್ 30 ರಂದು ರಿಲೀಸ್ ಆಗಿದ್ದ ಕಾಂತಾರ ಸಿನಿಮಾ 300 ಕೋಟಿ ರೂ. ಕಲೆಕ್ಷನ್ ಮಾಡಿದೆ ಎನ್ನಲಾಗುತ್ತಿದೆ.

ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಿಗೆ ಡಬ್ ಆಗಿದ್ದು ಪ್ಯಾನ್-ಇಂಡಿಯನ್ ಚಲನಚಿತ್ರವನ್ನಾಗಿ ಮಾಡಿದೆ.  ಬಾಕ್ಸ್ ಆಫೀಸ್ ನಲ್ಲಿ ದಾಖಲೆಗಳನ್ನು ಮುರಿಯುತ್ತಿದೆ.

ಕಳೆದ ತಿಂಗಳು 25 ದಿನಗಳಲ್ಲಿ 77 ಲಕ್ಷಕ್ಕೂ ಹೆಚ್ಚು ವೀಕ್ಷಣೆಗಳನ್ನು ದಾಖಲಿಸುವ ಮೂಲಕ ಕರ್ನಾಟಕದಲ್ಲಿ ಅತಿ ಹೆಚ್ಚು ವೀಕ್ಷಿಸಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಚಿತ್ರ ಈಗ ಮತ್ತೊಂದು ಮೈಲಿಗಲ್ಲು ಮೀರಿದೆ.

ಪ್ರೊಡಕ್ಷನ್ ಹೌಸ್ ಹೊಂಬಾಳೆ ಫಿಲಂಸ್‌ನ ಆಪ್ತ ಮೂಲಗಳು, ರಿಷಬ್ ಶೆಟ್ಟಿ ನಿರ್ದೇಶನದ  ಕಾಂತಾರ  ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ 300 ಕೋಟಿ ರೂಪಾಯಿಗಳ ಗಡಿಯನ್ನು ಮುಟ್ಟಿದೆ, ಕರ್ನಾಟಕದಲ್ಲಿ ಅರ್ಧದಷ್ಟು ಕಲೆಕ್ಷನ್ ಗಳಿಸಿದೆ ಎಂದು ತಿಳಿದು ಬಂದಿದೆ.

ತಮ್ಮ ಡ್ರೀಮ್ ವಾರಿಯರ್ ಪಿಕ್ಚರ್ಸ್ ಮೂಲಕ ತಮಿಳುನಾಡಿನಲ್ಲಿ ಚಿತ್ರವನ್ನು ವಿತರಿಸಿರುವ ನಿರ್ಮಾಪಕ ಎಸ್‌ಆರ್ ಪ್ರಭು ಅವರು "ಅಕ್ಟೋಬರ್ 30 ರಂದು ಚಿತ್ರವು ತನ್ನ ಅತ್ಯಧಿಕ ಕಲೆಕ್ಷನ್‌ಗಳನ್ನು ದಾಖಲಿಸಿದೆ" ಎಂದು ಹರ್ಷ ವ್ಯಕ್ತಪಡಿಸಿದ್ದಾರೆ, ಇದು ಪ್ರಶಂಸನೀಯ ಸಾಧನೆಯಾಗಿದೆ.

ರಿಷಬ್ ಶೆಟ್ಟಿಯ 'ಕಾಂತಾರ' ಸಿನಿಮಾ 300 ಕೋಟಿ ಕ್ಲಬ್ ಸೇರಿದರೆ, ಬಾಕ್ಸಾಫೀಸ್‌ನಲ್ಲಿ ಹೊಸ ಇತಿಹಾಸವನ್ನು ಸೃಷ್ಟಿಸಲಿದೆ. 2022ರಲ್ಲಿ 300 ಕೋಟಿ ಕ್ಲಬ್ ಸೇರಿದ 7ನೇ ಸಿನಿಮಾ ಆಗಲಿದೆ.

ರಿಷಬ್ ಶೆಟ್ಟಿ ಸಿನಿಮಾ 'ಕಾಂತಾರ' ಕರ್ನಾಟಕದಲ್ಲಿ ರಿಲೀಸ್ ಆಗಿ ಒಂದು ತಿಂಗಳನ್ನು ಯಶಸ್ವಿಯಾಗಿ ಪೂರೈಸಿದೆ. 50 ದಿನಗಳತ್ತ ಮುನ್ನುಗ್ಗುತ್ತಿರುವ 'ಕಾಂತಾರ' ಗುಂಗು ಮಾತ್ರ ಕಮ್ಮಿಯಾಗಿಲ್ಲ. ಇನ್ನು 'ಕಾಂತಾರ' ಹಿಂದಿ ಹಾಗೂ ತೆಲುಗಿನಲ್ಲಿ ಕ್ರೇಜ್ ಹೆಚ್ಚಾಗಿದೆ. ಇನ್ನು ವೀಕೆಂಡ್‌ನಲ್ಲಿ ಮಲಯಾಳಂ ವರ್ಷನ್‌ ಕೂಡ ಸದ್ದು ಮಾಡುತ್ತಿದೆ. ಅತ್ತ ಓವರ್‌ಸೀಸ್‌ನಲ್ಲೂ 'ಕಾಂತಾರ' ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಹೀಗಾಗಿ ಬಾಕ್ಸಾಫೀಸ್‌ನಲ್ಲಿ ಮತ್ತೊಂದು ದಾಖಲೆ ಬರೆಯೋದು ಗ್ಯಾರಂಟಿ ಎನ್ನಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com