ರಸ್ತೆ ಅಪಘಾತದಲ್ಲಿ ಕಿರುತೆರೆ ನಟಿ ಕಲ್ಯಾಣಿ ಕುರಾಳೆ ದುರ್ಮರಣ!

ಮರಾಠಿ ಕಿರುತೆರೆ ನಟಿ ಕಲ್ಯಾಣಿ ಕುರಾಳೆ-ಜಾಧವ್ ಶನಿವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ಕಲ್ಯಾಣಿ ಕುರಾಳೆ
ಕಲ್ಯಾಣಿ ಕುರಾಳೆ
Updated on: 

ಮರಾಠಿ ಕಿರುತೆರೆ ನಟಿ ಕಲ್ಯಾಣಿ ಕುರಾಳೆ-ಜಾಧವ್ ಶನಿವಾರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. 

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ 32 ವರ್ಷದ ಕಲ್ಯಾಣಿ ಎಂಬಾಕೆಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಹಾಲೋಂಡಿ ಸಾಂಗ್ಲಿ ಬಳಿಯಿಂದ ರೆಸ್ಟೋರೆಂಟ್ ಮುಚ್ಚಿ ಕಲ್ಯಾಣಿ ಬೈಕ್ ನಲ್ಲಿ ಮನೆಗೆ ಮರಳುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಟ್ರ್ಯಾಕ್ಟರ್ ಚಾಲಕನ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಕೊಲ್ಲಾಪುರ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಕಲ್ಯಾಣಿ ನಿನ್ನೆ ಸಂಜೆ ಮನೆಗೆ ತೆರಳುತ್ತಿದ್ದಾಗ ಸಾಂಗ್ಲಿ-ಕೊಲ್ಹಾಪುರ ಹೆದ್ದಾರಿಯ ಹಾಲೊಂಡಿ ಸಾಂಗ್ಲಿ ಬಳಿ ಅಪಘಾತ ಸಂಭವಿಸಿತ್ತು. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಕಲ್ಯಾಣಿಗೆ ಡಿಕ್ಕಿ ಹೊಡೆದ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
 
ಕೊಲ್ಲಾಪುರದ ಶಿರೋಲಿ ಪೊಲೀಸ್ ಠಾಣೆಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದರು.

ಕಲ್ಯಾಣಿ ಮರಾಠಿ ಕಿರುತೆರೆ ಕ್ಷೇತ್ರದಲ್ಲಿ ಖ್ಯಾತಿ ಪಡೆದಿದ್ದರು. 'ತುಜ್ಯತ್ ಜೀವ್ ರಂಗಾ' ಮತ್ತು 'ದಖಂಚ ರಾಜ ಜ್ಯೋತಿಬಾ' ನಂತಹ ಟಿವಿ ಶೋಗಳಲ್ಲಿ ಕೆಲಸ ಮಾಡಿದ್ದಾರೆ. ಕಲ್ಯಾಣಿ ಇತ್ತೀಚೆಗೆ ಕೊಲ್ಲಾಪುರದಲ್ಲಿ ರೆಸ್ಟೋರೆಂಟ್ ಅನ್ನು ತೆರೆದಿದ್ದರು. ಅಲ್ಲಿ ಅವರೇ ಗ್ರಾಹಕರನ್ನು ನೋಡಿಕೊಳ್ಳುತ್ತಿದ್ದರು. ಕಲ್ಯಾಣಿ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದರು. ಅವರ ಸಾವಿಗೆ ಕೆಲವು ಗಂಟೆಗಳ ಮೊದಲು, ಅವರು Instagram ನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com