ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಡಿಂಗ್ರಿ ನಾಗರಾಜ್ ಅವರು ನಟಿಯರಿಗೆ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸುತ್ತಾರೆ ಮತ್ತು ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ನಟಿ ಮತ್ತು ಸಂಘದ ಉಪಾಧ್ಯಕ್ಷರಾದ ರಾಣಿ ಗಂಭೀರ ಆರೋಪ ಮಾಡಿದ್ದಾರೆ.
ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್ ಅವರು ಮಹಿಳಾ ಕಲಾವಿದರ ಜತೆಗೆ ಅಸಭ್ಯವಾಗಿ ವರ್ತಿಸುವುದರ ಜತೆಗೆ, ಅವಾಚ್ಯ ಶಬ್ದಗಳಿಂದ ಅವಮಾನಿಸುತ್ತಿದ್ದಾರೆ. ಜತೆಗೆ, ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸುತ್ತಾರೆ. ಈ ವಿಚಾರವಾಗಿ ಗಲಾಟೆಯೂ ಆಗಿದೆ. ಸಂಘದ ಸಭೆಯಲ್ಲಿ ಚರ್ಚೆಯೂ ಆಗಿದೆ’ ಎಂದು ಹೇಳಿದ್ದಾರೆ.
ಈ ರೀತಿ ಅಶ್ಲೀಲ ವಿಡಿಯೋಗಳನ್ನು ಕಳಿಸಬೇಡಿ ಎಂದು ಹೇಳಿದ್ದೆವು. ಏಕವಚನದಲ್ಲಿ ನಮ್ಮನ್ನು ಮಾತನಾಡಿಸುತ್ತಾರೆ. ಈ ಬಗ್ಗೆ ಪ್ರಶ್ನೆ ಮಾಡಿದಾಗ ಅಸಭ್ಯ ಪದ ಬಳಸಿ ನಾವು ಹೇಳುವ ಹಾಗೆ ಕೇಳುವುದಿದ್ದರೆ ಕೇಳಿ, ಇಲ್ಲ ಅಂದರೆ ಹೋಗಿ ಅಂತ ಹೇಳುತ್ತಾರೆ. ಯಾವುದೇ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಾಗ ನಮ್ಮ ಬಳಿ ಚರ್ಚೆ ಮಾಡದೆ ಅವರೇ ನಿರ್ಧಾರಕ್ಕೆ ಬರುತ್ತಾರೆ.
ಏನೇ ಹೇಳಿದರೂ ನೀವು ರಾಜೀನಾಮೆ ಕೊಟ್ಟು ಹೋಗಿ ಅಂತಾರೆ. ನಾನು ಮೊದಲ ಹೆಜ್ಜೆ ತೆಗೆದುಕೊಂಡು ಮುಂದೆ ಬಂದಿದ್ದೇನೆ, ಸಾಕಷ್ಟು ಹಿರಿಯ ಕಲಾವಿದರಿಗೂ ಈ ವಿಷಯವನ್ನು ತಿಳಿಸಿದ್ದೇನೆ" ಎಂದು ರಾಣಿ ಹೇಳಿದ್ದಾರೆ.
Advertisement