ಬಹುಭಾಷಾ ನಟ ಕಮಲ್ ಹಾಸನ್ ಅಸ್ವಸ್ಥರಾಗಿದ್ದು, ಅವರು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ಧಾರೆ.
ಕಮಲಹಾಸನ್ ಕಳೆದ ರಾತ್ರಿ ಎಸ್ ಆರ್ ಎಂ ಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಜ್ಞ ವೈದ್ಯರಿಂದ ಕಮಲ ಹಾಸನ್ಗೆ ಟ್ರೀಟ್ಮೆಂಟ್ ಪಡೆದುಕೊಳ್ಳುತ್ತಿದ್ಧಾರೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ದಿಡೀರ್ ಆಸ್ಪತ್ರೆಗೆ ದಾಖಲಾಗಿದ್ಧಾರೆ.
ಇಂದು ಮಧ್ಯಾಹ್ನದ ವೇಳೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ನಾರ್ಮಲ್ ಚೆಕಪ್ಗಾಗಿ ದಾಖಲಾಗಿದ್ದಾರೆ ಎಂದು ಕುಟುಂಬದ ಮಾಹಿತಿ ನೀಡಿದೆ. ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯಲು ವೈದ್ಯರು ಸೂಚನೆ ನೀಡಿದ್ಧಾರೆ. ಕಮಲ್ ಹೈದ್ರಾಬಾದ್ನಿಂದ ವಾಪಸ್ ಆದ ಕೂಡಲೇ ಅಸ್ವಸ್ಥರಾಗಿದ್ದರು.
ನಟ ಕಮಲ್ ಹಾಸನ್ ಅವರಿಗೆ ಈಗ 68 ವರ್ಷ ವಯಸ್ಸು. ಈಗಲೂ ಅವರು ಸಿನಿಮಾ ರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಿರ್ಮಾಣ ಹಾಗೂ ನಟನೆಯಲ್ಲಿ ಬ್ಯುಸಿ ಇದ್ದಾರೆ. ಇದರ ಜತೆಗೆ ‘ತಮಿಳು ಬಿಗ್ ಬಾಸ್ ಸೀಸನ್ 6’ನ್ನು ನಡೆಸಿಕೊಡುತ್ತಿದ್ದಾರೆ.
Advertisement