ತೆರೆಯ ಮೇಲೆ ಕಮಾಲ್ ಮಾಡಲು ಬರುತ್ತಿದೆ 'ಪ್ರೀತ್ಸೆ' ಜೋಡಿ: '45' ಸಿನಿಮಾದಲ್ಲಿ ಶಿವಣ್ಣ-ಉಪೇಂದ್ರ ಮೋಡಿ!
ಇತ್ತೀಚೆಗಷ್ಟೇ ಬಿಡುಗಡೆಯಾದ ‘ಗಾಳಿಪಟ 2’ ಚಿತ್ ನಿರ್ಮಾಣ ಮಾಡಿದ್ದ ರಮೇಶ್ ರೆಡ್ಡಿ, ತಮ್ಮ ಸೂರಜ್ ಪ್ರೊಡಕ್ಷನ್ ಅಡಿ ಇನ್ನೊಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದಾರೆ.
ಅರ್ಜುನ್ ಜನ್ಯ ನಿರ್ದೇಶನದಲ್ಲಿ, ಶಿವರಾಜಕುಮಾರ್ ಅಭಿನಯದ ಚಿತ್ರಕ್ಕೆ ‘45’ ಎಂಬ ಟೈಟಲ್ ಇಡಲಾಗಿದೆ. ಈಗ ಈ ಚಿತ್ರಕ್ಕೆ ಉಪೇಂದ್ರ ಸೇರ್ಪಡೆಯಾಗಿದ್ದು, ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ.
ಶಿವಣ್ಣ ಮತ್ತು ಉಪೇಂದ್ರ ಜೊತೆಯಾಗಿ ಕೆಲಸ ಮಾಡುತ್ತಿರುವುದು ಇದು ನಾಲ್ಕನೇ ಬಾರಿ. ಈ ಹಿಂದೆ ‘ಓಂ’ ಚಿತ್ರದಲ್ಲಿ ಶಿವಣ್ಣ ಅವರನ್ನು ನಿರ್ದೇಶಿಸಿದ್ದರು ಉಪೇಂದ್ರ. ಆ ನಂತರ ಇಬ್ಬರೂ ‘ಪ್ರೀತ್ಸೇ' ಮತ್ತು 'ಲವ-ಕುಶ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. ಈಗ ಅವರಿಬ್ಬರೂ ‘45’ ಚಿತ್ರದಲ್ಲಿ ಮತ್ತೆ ಒಟ್ಟಾಗಿ ನಟಿಸಲಿದ್ದಾರೆ.
ಶಿವರಾಜಕುಮಾರ್ ಅವರ ಹುಟ್ಟುಹಬ್ಬದಂದು ಅಧಿಕೃತವಾಗಿ ಘೋಷಣೆಯಾದ ‘45’, ಈಗ ಪ್ರೀ-ಪ್ರೊಡಕ್ಷನ್ ಹಂತದಲ್ಲಿದೆ. ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಚಿತ್ರೀಕರಣವು ಡಿಸೆಂಬರ್ ನಿಂದ ಅಧಿಕೃತವಾಗಿ ಪ್ರಾರಂಭವಾಗಲಿದೆ.
ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಕಥೆ-ಚಿತ್ರಕಥೆ ಬರೆದಿದ್ದು, ನಿರ್ದೇಶನದ ಜೊತೆಗೆ ಸಂಗೀತ ನಿರ್ದೇಶನದ ಜವಾಬ್ದಾರಿಯನ್ನು ಸಹ ಅವರೇ ಹೊತ್ತಿದ್ದಾರೆ. ಈಗಾಗಲೇ ಚಿತ್ರ ಪ್ರಾರಂಭವಾಗುವುದಕ್ಕೆ ಮುನ್ನವೇ ಚಿತ್ರದ ಆಡಿಯೋ ಹಕ್ಕುಗಳಿಗೆ ಭಾರೀ ಡಿಮ್ಯಾಂಡ್ ಉಂಟಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ