ಜೋಗಿ ಪ್ರೇಮ್- ಧ್ರುವ ಸರ್ಜಾ ಸಿನಿಮಾದಲ್ಲಿ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್?

ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್  ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ ಬರಲಿದ್ದಾರೆ.
ಪ್ರೇಮ್ ಮತ್ತು ಮೋಹನ್ ಲಾಲ್
ಪ್ರೇಮ್ ಮತ್ತು ಮೋಹನ್ ಲಾಲ್

ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್  ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ ಬರಲಿದ್ದಾರೆ.

ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ನಾನಾ ಸಿನಿಮಾ ರಂಗದ ಕಲಾವಿದರು ಕೂಡ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಮೋಹನ್ ಲಾಲ್ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಪ್ರೇಮ್  ಹಂಚಿಕೊಂಡಿದ್ದು, ಇದೊಂದು ಅಪರೂಪದ ಭೇಟಿ ಆಗಿತ್ತು ಎಂದು ಬರೆದುಕೊಂಡಿದ್ದಾರೆ.

ಇಂತಹ ಮಹಾನ್ ಕಲಾವಿದನನ್ನು ಭೇಟಿ ಮಾಡಿದ್ದು ಸಂಭ್ರಮ ತಂದಿದೆ ಎಂದಿರುವ ಪ್ರೇಮ್, ಅಕ್ಟೋಬರ್ 20ರ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಸಹಕಾರವಿರಲಿ ಎಂದೂ ಅವರು ಕೋರಿದ್ದಾರೆ.  ಪ್ರೇಮ್ ನಿರ್ದೇಶನದ ಈ ಸಿನಿಮಾದಲ್ಲಿ ಮೋಹನ್ ಲಾಲ್ ಅವರು ನಟಿಸಲಿದ್ದಾರೆಯೇ ಎಂಬ ಊಹಾಪೋಹಗಳು ಕೇಳಿ ಬರುತ್ತಿವೆ.

ಕೆವಿಎನ್ ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಈಗಾಗಲೇ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಮೈಸೂರಿನಲ್ಲಿ ಸಿನಿಮಾದ ಮುಹೂರ್ತವಾಗಿದ್ದು, ಅರ್ಜುನ್ ಜನ್ಯ ಈ ಸಿನಿಮಾಗಾಗಿ ಸಂಗೀತ ಸಂಯೋಜನೆಯ ಕೆಲಸವನ್ನೂ ಆರಂಭಿಸಿದ್ದಾರೆ. ಈ ಸಿನಿಮಾದ ಹಾಡುಗಳು ಈಗಾಗಲೇ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಮಾತೂ ಇದೆ.

ಸಾಮಾಜಿಕ ಜಾಲತಾಣದಲ್ಲಿನ ತಮ್ಮ ಖಾತೆಗಳಲ್ಲಿ ಮೋಹನ್ ಲಾಲ್ ಅವರನ್ನು ಭೇಟಿಯಾದ ಚಿತ್ರವನ್ನು ಹಂಚಿಕೊಂಡಿರುವ ಜೋಗಿ ಪ್ರೇಮ್ ಮೋಹನ್ ಲಾಲ್ ಅವರ ಸರಳತೆಗೆ ಮನಸೋತು ಬರವಣಿಗೆ ಮೂಲಕ ಹೊಗಳಿದ್ದಾರೆ. ನಿಮ್ಮ ಬೆಂಬಲ ನಾವು ಮತ್ತಷ್ಟು ಬೆಳವಣಿಗೆ ಹೊಂದಲು ಸಹಕಾರಿಯಾಗಿದೆ ಎಂದು ಮೋಹನ್ ಲಾಲ್ ಅವರನ್ನು ಹೊಗಳಿ ಪ್ರೇಮ್ ಬರೆದುಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com