ಜಗ್ಗೇಶ್ -ಅದಿತಿ ಪ್ರಭುದೇವ ನಟನೆಯ 'ತೋತಾಪುರಿ' ಬಿಡುಗಡೆಗೆ ದಿನಾಂಕ ಫಿಕ್ಸ್!

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ  ಘೋಷಣೆ ಮಾಡಿದೆ. ಈ ಹಿಂದೆ ನೀರ್ ದೋಸೆ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿಜಯ ಪ್ರಸಾದ್ ಮತ್ತು ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ. 
ತೋತಾಪುರಿ ಸಿನಿಮಾ ಸ್ಟಿಲ್
ತೋತಾಪುರಿ ಸಿನಿಮಾ ಸ್ಟಿಲ್
Updated on

ಕನ್ನಡ ಚಿತ್ರರಂಗದಲ್ಲಿ ಶೀರ್ಷಿಕೆಯಿಂದಲೇ ಸಖತ್ ಸುದ್ದಿ ಮಾಡುತ್ತಿರುವ ಹಾಗೂ ನವರಸನಾಯಕ ಜಗ್ಗೇಶ್ ಅಭಿನಯದ ಹಾಗೂ ನೀರ್​​ದೋಸೆ ಸಿನಿಮಾ‌ ನಿರ್ದೇಶಕ ವಿಜಯ್ ಪ್ರಸಾದ್ ಕಾಂಬಿನೇಷನ್​ನಲ್ಲಿ ಮೂಡಿ ಬರುತ್ತಿರುವ ಈ ವರ್ಷದ ಬಹುನಿರೀಕ್ಷಿತ ಚಿತ್ರ ತೋತಾಪುರಿ ಬಿಡುಗಡೆಗೆ ಸಿದ್ಧಗೊಂಡಿದೆ. ಸೆಪ್ಟಂಬರ್ 30 ರಂದು  ತೋತಾಪುರಿ ಸಿನಿಮಾ ರಿಲೀಸ್ ಆಗಲು ರೆಡಿಯಾಗಿದೆ.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ರಿಲೀಸ್ ಬಗ್ಗೆ ಅಧಿಕೃತ  ಘೋಷಣೆ ಮಾಡಿದೆ. ಈ ಹಿಂದೆ ನೀರ್ ದೋಸೆ ಸಿನಿಮಾದಲ್ಲಿ ಕೆಲಸ ಮಾಡಿದ್ದ ವಿಜಯ ಪ್ರಸಾದ್ ಮತ್ತು ಜಗ್ಗೇಶ್ ತೋತಾಪುರಿ ಮೂಲಕ ಒಂದಾಗಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಜಗ್ಗೇಶ್, ತಮ್ಮ ಹಿಂದಿನ ಸಿನಿ ಪ್ರಯಾಣದ ನೆನಪನ್ನು ಸ್ಮರಿಸಿದರು. ಸಾಮಾಜಿಕ ಮಾಧ್ಯಮಗಳ ಬಗ್ಗೆಯೂ ತಮ್ಮ ಅಸಮಾಧಾನ ವ್ಯಕ್ತ ಪಡಿಸಿದರು.

ಈ ಚಿತ್ರದಲ್ಲಿ ಎರಡು ಶೇಡ್​ನಲ್ಲಿ ಜಗ್ಗೇಶಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮಾಡೋದಿಕ್ಕೆ ಮೊದಲಿಗೆ ನಿರ್ಮಾಪಕ ಕೆ ಸುರೇಶ್​ಗೆ ಇರುವ ತಾಳ್ಮೆ ಮುಖ್ಯ ಕಾರಣ. ಯಾಕೆಂದರೆ ದೊಡ್ಡ ತಾರ ಬಳಗ, ಜೊತೆಗೆ ಎರಡು ವರ್ಷ ಕೊರೊನಾ ಎಂಬ ಹೆಮ್ಮಾರಿಯಿಂದ ತಪ್ಪಿಸಿಕೊಂಡು ಈ ಸಿನಿಮಾ ಮಾಡಲಾಗಿದೆ. ನಿರ್ಮಾಪಕರ ತಾಳ್ಮೆ ಮೆಚ್ಚಬೇಕು ಎಂದು ಹೇಳಿದರು.

ಗೋವಿಂದಾಯ ನಮಃ, ಶ್ರಾವಣಿ ಸುಬ್ರಹ್ಮಣ್ಯ ಮತ್ತು ಶಿವಲಿಂಗ  ಹಿಟ್ ಚಿತ್ರಗಳ ನಿರ್ಮಾಪಕ ಕೆಎ ಸುರೇಶ್ ಮೊನಿಫ್ಲಿಕ್ಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ತೋತಾಪುರಿ ನಿರ್ಮಿಸಿದ್ದಾರೆ. ದೊಡ್ಡ ಬಜೆಟ್‌ನಲ್ಲಿ ಎಂದು ಹೇಳಲಾದ ಈ ಚಿತ್ರವನ್ನು 100 ದಿನಗಳ ಶೆಡ್ಯೂಲ್‌ನಲ್ಲಿ ಚಿತ್ರೀಕರಿಸಲಾಗಿದೆ. ನಿರ್ದೇಶಕ ವಿಜಯ ಪ್ರಸಾದ್ ಜೊತೆ ಸಿದ್ಲಿಂಗು, ನೀರ್​​ದೋಸೆ, ಪೆಟ್ರೋಮ್ಯಾಕ್ಸ್ ಸಿನಿಮಾಗಳನ್ನು ಮಾಡಿರುವ ಖಾಯಂ ನಟಿ ಅಂದ್ರೆ ಅದು ಬಹುಭಾಷೆ ನಟಿ ಸುಮನಾ ರಂಗನಾಥ್. ಈ ಚಿತ್ರದಲ್ಲಿ ಸಿಸ್ಟರ್ ವಿಕ್ಟೋರಿಯಾ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸುಮನ್ ರಂಗನಾಥ್,  ಡಾಲಿ ಧನಂಜಯ್ ,ವೀಣಾ ಸುಂದರ್ ಮತ್ತು ದತ್ತಣ್ಣ ಮುಂತಾದವರ ತಾರಾಬಳಗವಿದೆ, ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com