"ಮಗಳು ಜಾನಕಿ" ಖ್ಯಾತಿಯ ಕಿರುತೆರೆ ಕಲಾವಿದ ಮಂಡ್ಯ ರವಿ ಆರೋಗ್ಯ ಸ್ಥಿತಿ ಗಂಭೀರ

ಕಿರುತೆರೆ ಕಲಾವಿದ ಮಂಡ್ಯ ರವಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಮಂಡ್ಯ ರವಿ (ಸಂಗ್ರಹ ಚಿತ್ರ)
ಮಂಡ್ಯ ರವಿ (ಸಂಗ್ರಹ ಚಿತ್ರ)
Updated on

ಬೆಂಗಳೂರು: ಕಿರುತೆರೆ ಕಲಾವಿದ ಮಂಡ್ಯ ರವಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.

ತೀವ್ರ ಅನಾರೋಗ್ಯಕ್ಕೆ ತುತ್ತಾಗಿರುವ ಮಂಡ್ಯ ರವಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗುತ್ತಿದೆ.

ಕಿರುತೆರೆ ನಿರ್ದೆಶಕ ಟಿಎನ್ ಸೀತಾರಾಮ್ ಅವರ ಮುಕ್ತ ಮುಕ್ತ, ಮಗಳು ಜಾನಕಿ ಮುಂತಾದ ಧಾರಾವಾಹಿಗಳಲ್ಲಿ ತಮ್ಮ ಮನೋಜ್ಞ ನಟನೆಯ ಮೂಲಕ ಮಂಡ್ಯ ರವಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ.

ಮಂಡ್ಯ ರವಿ ಅವರಿಗೆ ಕಿಡ್ನಿ ಸಮಸ್ಯೆ ಇದ್ದು, ಜಾಂಡೀಸ್ ಸಹ ಎದುರಾಗಿರುವುದು ಆರೋಗ್ಯ ಪರಿಸ್ಥಿತಿ ಹದಗೆಡಲು ಕಾರಣ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com